ಚೆನ್ನೈ: ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ದೇಶಾದ್ಯಂತ ಸುರಕ್ಷಿತ, ಕೋವಿಡ್ ಮುಕ್ತ ವಾತಾವರಣಕ್ಕೆ ಪ್ರಯತ್ನಿಸುತ್ತಿದ್ದರೆ, ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ಸುರಕ್ಷಿತ ಕಾರ್ಯಾಚರಣೆಯನ್ನು ಪುನಾರಂಭಿಸಿದೆ.
ಪ್ರಯಾಣದ ಮಾನದಂಡಗಳಲ್ಲಿ ಸಡಿಲಗೊಳಿಸುವಿಕೆಯಿಂದ ಚೆನ್ನೈ ಮೂಲದ ವಿಮಾನ ಕಾರ್ಯಾಚರಣೆಯಲ್ಲಿ ಹೆಚ್ಚಳ ಕಂಡು ಬಂದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಟಚ್‌ಲೆಸ್ ಪಾಯಿಂಟ್‌ಗಳು, ಕೈ ಸ್ಯಾನಿಟೈಸ್ ಮತ್ತು ಪ್ರಯಾಣಿಕರ ವಸ್ತುಗಳ ಸಂಪೂರ್ಣ ಸುರಕ್ಷತೆಯೊಂದಿಗೆ ವಿಮಾನ ನಿಲ್ದಾಣವು ತಸುಸಜ್ಜಿತ ಪ್ರವೇಶ ಪ್ರೋಟೋಕಾಲ್‌ಗಳ ಮೇಲೆ ಕೇಂದ್ರೀಕರಿಸಿದೆ. ಅಧಿಕಾರಿಗಳು ಆವರಣದಲ್ಲಿ ತುರ್ತು ಸೌಲಭ್ಯಗಳೊಂದಿಗೆ ಪ್ರತ್ಯೇಕ ಕೊಠಡಿಗಳನ್ನು ಸ್ಥಾಪಿಸಿದ್ದಾರೆ. ಪರಿಣಾಮಕಾರಿ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಅಂತಾರಾಷ್ಟ್ರೀಯ ಕಾರ್ಯಾಚರಣೆಯನ್ನು ಪುನರಾರಂಭಿಸಲು ಸಹಕಾರಿಯಾಗಿದೆ.
ವೈರಸ್ ನಿಯಂತ್ರಣ ಕ್ರಮಗಳ ಬಗ್ಗೆ ಜನರು ಹೆಚ್ಚು ಜಾಗೃತರಾಗಿದ್ದಾರೆ. ವಿಮಾನ ನಿಲ್ದಾಣ ಪ್ರವೇಶಿಸಿದ ಕೂಡಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ ಎಂದು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಸುನೀಲ್ ದತ್ ಹೇಳಿದ್ದಾರೆ.