ETV Bharat / bharat

ಅಪ್ರಾಪ್ತ ಸಹೋದರಿಯರಿಬ್ಬರ ಮೇಲೆ ಅತ್ಯಾಚಾರ: 11 ಆರೋಪಿಗಳು ಅರೆಸ್ಟ್‌ - ಅಪ್ರಾಪ್ತೆಯರ ಮೇಲೆ ರೇಪ್​

ಅಪ್ರಾಪ್ತೆಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

gangraping two minor
gangraping two minor
author img

By

Published : Jul 30, 2020, 5:43 PM IST

ರಾಯ್ಪುರ್​​​(ಛತ್ತೀಸ್​ಗಢ): ಅಪ್ರಾಪ್ತ ಸಹೋದರಿಯರಿಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಛತ್ತೀಸ್​ಗಢ ಪೊಲೀಸರು ಯಶಸ್ವಿಯಾಗಿದ್ದಾರೆ.

ಛತ್ತೀಸ್​ಗಢದ ಕೆಲ್ಸಾ ಗ್ರಾಮದಲ್ಲಿನ ಇಬ್ಬರು ಅಪ್ರಾಪ್ತೆಯರ ಮೇಲೆ ಕಳೆದ ಎರಡು ತಿಂಗಳ ಹಿಂದೆ ಅತ್ಯಾಚಾರ ನಡೆದಿತ್ತು. ಇಬ್ಬರು ಸ್ನೇಹಿತರೊಂದಿಗೆ ಹೊರಗಡೆ ಹೋಗಿದ್ದ ವೇಳೆ ಒಟ್ಟು ಎಂಟು ಜನರು ಇವರನ್ನು ತಡೆದು ಅಮಾನವೀಯ ರೀತಿಯಲ್ಲಿ ಥಳಿಸಿ ತದನಂತರ ಅತ್ಯಾಚಾರವೆಸಗಿದ್ದರು. ಬಳಿಕ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದರು.

ಇದಾದ ಬಳಿಕ, ಇತರೆ ಯುವಕರು ಬಾಲಕಿಯರ ಮೇಲೆ ಸತತವಾಗಿ ಅತ್ಯಾಚಾರ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿ ಪೋಷಕರು ಪೊಲೀಸ್‌ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣದಲ್ಲಿ ಭಾಗಿಯಾಗಿರುವ 11 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.