ETV Bharat / bharat

ಅತ್ಯಾಚಾರ ಎಸಗಲು ಬಂದಾಗ ವಿರೋಧಿಸಿದ ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಕಾಮುಕ! - ಅತ್ಯಾಚಾರ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಲು ಮುಂದಾದ ಕಾಮುಕನೊಬ್ಬ ಆಕೆ ವಿರೋಧಿಸಿದ್ದರಿಂದ ಕೋಪಗೊಂಡು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

Chhattisgarh news
Chhattisgarh news
author img

By

Published : Jul 2, 2020, 3:41 PM IST

ಮುಂಗೇಲಿ(ಛತ್ತೀಸ್​ಗಢ): ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರವೆಸಗಲು ಬಂದ ಕಾಮುಕನೊಬ್ಬ ಆಕೆಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಅಮಾನವೀಯ ಘಟನೆ ಛತ್ತೀಸ್​ಗಢದ ಮುಂಗೇಲಿಯಲ್ಲಿ ನಡೆದಿದೆ.

ಜೂನ್​ 30ರಂದು ಈ ಘಟನೆ ನಡೆದಿದ್ದು, ಮುಂಗೇಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬಾಲಕಿ ಒಬ್ಬಳೇ ಇರುವುದನ್ನ ನೋಡಿ ಮನೆಯೊಳಗೆ ನುಗ್ಗಿದ್ದಾನೆ. ಈ ವೇಳೆ ಆಕೆಯ ಮೇಲೆ ಅತ್ಯಾಚಾರವೆಸಗಲು ಮುಂದಾಗಿದ್ದಾನೆ. ಇದಕ್ಕೆ ಬಾಲಕಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಕಾಮುಕ ವ್ಯಕ್ತಿ ಸೀಮೆಎಣ್ಣೆ ಸುರಿದು ಬಾಲಕಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಈ ವೇಳೆ, ಚೀರಾಡುತ್ತಾ ಆಕೆ ಮನೆಯಿಂದ ಹೊರ ಬಂದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಹೀಗೆ ಕೃತ್ಯ ಎಸಗಿದ್ದ ಕಾಮುಕ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸ್​ ಸಬ್​ ಇನ್ಸ್​​ಪೆಕ್ಟರ್​​ ತೇಜ್​ರಾಮ್​ ಪಟೇಲ್​ ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನ 30 ವರ್ಷದ ಬಬ್ಲು ಬಾಸ್ಕರ್​ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ತಾನು ಮಾಡಿರುವ ತಪ್ಪು ಒಪ್ಪಿಕೊಂಡಿದ್ದಾನೆ. ವ್ಯಕ್ತಿಯ ಮೇಲೆ ಭಾರತೀಯ ದಂಡ ಸಂಹಿತೆ ಸೆಕ್ಷನ್​ 302(ಮರ್ಡರ್​), 506 (ಕ್ರೈಂ) ಹಾಗೂ 354 (ಲೈಂಗಿಕ ಕಿರುಕುಳ) ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.