ಛತ್ತೀಸ್ಗಢ: ರಾಜ್ಯದಲ್ಲಿ ಗಣಿಗಾರಿಕೆ ನಡೆಸಿ ಮಣ್ಣಿನಿಂದ ಮುಚ್ಚಿರುವ ಸ್ಥಳಗಳನ್ನು ನೀರಿನ ಸಂಗ್ರಹದ ಮೂಲವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳೀಯ ಜನರ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಮೀನುಗಾರಿಕೆ ಸೇರಿದಂತೆ ವಿವಿಧ ಉದ್ಯೋಗ ಸೃಷ್ಟಿ ಚಟುವಟಿಕೆಗಳನ್ನು ಈ ತಾಣಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಅವರು ಈಗಾಗಲೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಒಂದು ತಿಂಗಳೊಳಗೆ ಕ್ರಿಯಾ ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದು, ಪ್ರತಿ ಜಿಲ್ಲೆಯಲ್ಲಿ ಮುಚ್ಚಿರುವ ಗಣಿಗಾರಿಕೆ ಸ್ಥಳಗಳನ್ನು ಗುರುತಿಸುವಂತೆ ತಿಳಿಸಿದ್ದಾರೆ. ಜೊತೆಗೆ ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಕೆಲಸ ಪ್ರಾರಂಭಿಸುವಂತೆ ಸೂಚಿಸಿದ್ದಾರೆ.
ಇನ್ನು ಸೂರಜ್‌ಪುರ ಜಿಲ್ಲೆಯ ಮುಚ್ಚಿದ ಕೆನಪರ ಕಲ್ಲಿದ್ದಲು ಗಣಿಯನ್ನು ನೀರಿನ ಸಂರಕ್ಷಣಾ ತಾಣವಾಗಿ ಅಭಿವೃದ್ಧಿಪಡಿಸಲಾಗಿದ್ದು, ಪಿಸಿಕಲ್ಚರ್ ಮತ್ತು ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಸ್ಥಳೀಯರಿಗೆ ಉದ್ಯೋಗ ದೊರೆತಿದ್ದು, ಆದಾಯದ ಮೂಲವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.