ಲಖನೌ: ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹಥ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನ ಸಿಬಿಐನಿಂದ ನಡೆಸಲು ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
-
Chief Minister Yogi Adityanath orders Central Bureau of Investigation (CBI) probe into the #Hathras case: Chief Minister's Office (CMO) (File pic) pic.twitter.com/VVvf2M6hRc
— ANI UP (@ANINewsUP) October 3, 2020 " class="align-text-top noRightClick twitterSection" data="
">Chief Minister Yogi Adityanath orders Central Bureau of Investigation (CBI) probe into the #Hathras case: Chief Minister's Office (CMO) (File pic) pic.twitter.com/VVvf2M6hRc
— ANI UP (@ANINewsUP) October 3, 2020Chief Minister Yogi Adityanath orders Central Bureau of Investigation (CBI) probe into the #Hathras case: Chief Minister's Office (CMO) (File pic) pic.twitter.com/VVvf2M6hRc
— ANI UP (@ANINewsUP) October 3, 2020
ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಮಂಗಳವಾರ ದೆಹಲಿಯ ಸಫ್ತರ್ಜಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡದೇ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು.
ಹಥ್ರಾಸ್ ಅತ್ಯಾಚಾರ ಕೇಸ್: ಎಸ್ಪಿ, ಡಿಎಸ್ಪಿ,ಇನ್ಸ್ಪೆಕ್ಟರ್ ಸೇರಿ ಹಲವು ಅಧಿಕಾರಿಗಳು ಸಸ್ಪೆಂಡ್
ಇದಾದ ಬಳಿಕ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಸ್ಐಟಿ ತನಿಖೆಗೆ ಸಿಎಂ ಆದೇಶ ನೀಡಿ, ಏಳು ದಿನದೊಳಗೆ ವರದಿ ನೀಡುವಂತೆ ಆದೇಶ ಹೊರಡಿಸಿದ್ದರು. ವರದಿ ಸಿಗುತ್ತಿದ್ದಂತೆ ಇದರಲ್ಲಿ ಕೆಲ ಅಧಿಕಾರಿಗಳ ಲೋಪ ಕಂಡು ಬಂದಿದ್ದರಿಂದ ಎಸ್ಪಿ, ಡಿಎಸ್ಪಿ, ಇನ್ಸ್ಪೆಕ್ಟರ್ ಹಾಗೂ ಕೆಲ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಹೊರಹಾಕಿತ್ತು. ಪ್ರಕರಣದಲ್ಲಿ ಕೆಲವು ಅಧಿಕಾರಿಗಳು ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸ್ ಅಧಿಕ್ಷಕ ವಿಕ್ರಾಂತ್ ವೀರ್, ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಮ್ ಶಾಬ್ದಾ, ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ವರ್ಮಾ, ಹಿರಿಯ ಸಬ್ ಇನ್ಸ್ಪೆಕ್ಟರ್ ಜಗ್ವೀರ್ ಸಿಂಗ್ ಮತ್ತು ಹೆಡ್ ಕಾನ್ಸ್ಟೆಬಲ್ ಮೊಹರಿರ್ ಮಹೇಶ್ ಪಾಲ್ ಅಮಾನತುಗೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರಕರಣವನ್ನ ಸಿಬಿಐಗೆ ವಹಿಸಲಾಗಿದೆ.
ಹಥ್ರಾಸ್ ಪ್ರಕರಣ ಬಿಜೆಪಿ-ಕಾಂಗ್ರೆಸ್ ರಾಜಕೀಯ ಕೇಸರೆರಚಾಟಕ್ಕೆ ಕಾರಣವಾಗಿದ್ದು, ಈಗಾಗಲೇ ಉತ್ತರ ಪ್ರದೇಶ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.