ನವದೆಹಲಿ: ಪೂರ್ವ ಲಡಾಕ್‌ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ ಮಾಸ್ಕೋದಲ್ಲಿ ಮೂರು ದಿನಗಳ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯ ಹೊರತಾಗಿ ಚೀನಾ ರಕ್ಷಣಾ ಸಚಿವರು ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಸಭೆ ನಡೆಸಲು ಕೋರಿದ್ದಾರೆ.
ಎಸ್‌ಸಿಒ ಸಭೆಯಲ್ಲಿ ಚೀನಾ ರಕ್ಷಣಾ ಸಚಿವರು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂರು ದಿನಗಳ ಈ ಇವೆಂಟ್‌ನಲ್ಲಿ ಚೀನಾದ ರಕ್ಷಣಾ ಸಚಿವರೊಂದಿಗಿನ ಸಭೆ ರಾಜನಾಥ್ ಸಿಂಗ್ ಅವರ ವೇಳಾಪಟ್ಟಿಯಲ್ಲಿಲ್ಲ ಎಂದು ಮೂಲಗಳು ಈ ಹಿಂದೆ ತಿಳಿಸಿವೆ.
ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಮರು ಸ್ಥಾಪಿಸಲು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕೆಂದು ಭಾರತವು ಚೀನಾವನ್ನು ಒತ್ತಾಯಿಸಿದೆ. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ, ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಮಾತುಕತೆ ನಡೆಸುವುದು ಮುಂದಿನ ದಾರಿ ಎಂದು ಹೇಳಿದ್ದರು.
ನಿನ್ನೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಸ್ಕೋದಲ್ಲಿ ರಷ್ಯಾದ ರಕ್ಷಣಾ ಸಚಿವ ಸೆರ್ಗೆ ಶೋಯಿಗು ಅವರನ್ನು ಭೇಟಿಯಾದರು. ಇದರಲ್ಲಿ ಉಭಯ ದೇಶಗಳ ನಡುವೆ ರಕ್ಷಣಾ ಮತ್ತು ಕಾರ್ಯತಂತ್ರದ ಸಹಕಾರವನ್ನು ಬಲಪಡಿಸುವ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ.
ಎಸ್‌ಸಿಒದ ರಕ್ಷಣಾ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ರಾಜನಾಥ್ ಸಿಂಗ್ ಮೂರು ದಿನಗಳ ಕಾಲ ರಷ್ಯಾ ಪ್ರವಾಸದಲ್ಲಿದ್ದಾರೆ.