ETV Bharat / bharat

ಚಿನ್ಮಯಾನಂದ ಸ್ವಾಮಿ ಪ್ರಕರಣ: ಕಾನೂನು ವಿದ್ಯಾರ್ಥಿನಿ ಪರ ಪ್ರಿಯಾಂಕಾ ಪಾದಯಾತ್ರೆ

ಚಿನ್ಮಯಾನಂದ ಸ್ವಾಮಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿ ಬ್ಲಾಕ್​ ಮೇಲ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾನೂನು ವಿದ್ಯಾರ್ಥಿನಿ ಪರ ಪ್ರಿಯಾಂಕ ಗಾಂಧಿ ಪಾದಯಾತ್ರ ನಡೆಸಲಿದ್ದಾರೆ.​

ಪ್ರಿಯಾಂಕ ಗಾಂಧಿ
author img

By

Published : Oct 2, 2019, 1:20 PM IST

ಲಖನೌ(ಉತ್ತರ ಪ್ರದೇಶ): ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಸ್ವಾಮಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಬಂಧನಕ್ಕೊಳಗಾಗಿರುವ ಕಾನೂನು ವಿದ್ಯಾರ್ಥಿನಿಯ ಪರವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ. ಈ ಮೂಲಕ ಅತ್ಯಾಚಾರಕ್ಕೊಳಗಾದವರನ್ನು ಬೆದರಿಸಲಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಟ್ವಿಟ್ಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದ ಕಾನೂನು ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತರು 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದರೆ ವಿಡಿಯೋವೊಂದನ್ನ ಬಿಡುಗಡೆ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಿನ್ಮಯಾನಂದ ಸ್ವಾಮಿ​ ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಎಸ್​ಐಟಿ ತಂಡ ಕಾನೂನು ವಿದ್ಯಾರ್ಥಿನಿ ಮತ್ತು ಆಕೆಯ ಮೂರು ಜನ ಸ್ನೇಹಿತರನ್ನ ಬಂಧಿಸಿತ್ತು.

ನಿನ್ನೆಯಷ್ಟೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಲಯ ಕಾನೂನು ವಿದ್ಯಾರ್ಥಿನಿಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಬಗ್ಗೆ ಮಾತನಾಡಿರುವ ವಿದ್ಯಾರ್ಥಿನಿ ತಂದೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸೋದಾಗಿ ತಿಳಿಸಿದ್ದಾರೆ.

Intro:Body:

sfcd

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.