ನವದೆಹಲಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ಗ್ಯಾಸ್ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡಿರುವ ಪ್ರತಿಭಟನಾಕಾರರು ಪೊಲೀಸರನ್ನೇ ಅಟ್ಟಾಡಿಸಿ ಹೊಡೆದು, ಅವರ ಮೇಲೆ ಕಲ್ಲು ಎಸೆದಿರುವ ಘಟನೆ ನಡೆದಿದೆ.
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಮೋದನೆಗೊಂಡು, ಈಗಾಗಲೇ ರಾಷ್ಟ್ರಪತಿಗಳ ಅಂಕಿತ ಸಹ ಅದಕ್ಕೆ ಸಿಕ್ಕಿದೆ. ಹೀಗಾಗಿ ಅದರ ವಿರುದ್ಧ ದೆಹಲಿ, ಪಶ್ಚಿಮ ಬಂಗಾಳ,ಅಸ್ಸೋಂ ಸೇರಿದಂತೆ ಕೆಲ ಪ್ರಮುಖ ರಾಜ್ಯಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಯುತ್ತಿದೆ.
ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಶಾಲಾ ಬಸ್ಗೆ ಬೆಂಕಿ ಹಚ್ಚಿರುವ ಘಟನೆ ಸಹ ನಡೆದಿದೆ.