ಚೆನ್ನೈ(ತಮಿಳುನಾಡು): ಇಲ್ಲಿನ ಎಸ್ಆರ್ಎಂ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಕೈಯಲ್ಲಿ ಪಿಸ್ತೂಲ್ ಹಾಗೂ ಚಾಕು ಹಿಡಿದುಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದು, ಇದರ ವಿಡಿಯೋ ವೈರಲ್ ಆಗಿ ಸದ್ದು ಮಾಡುತ್ತಿದೆ.
ಚೆನ್ನೈನ ಉಪನಗರದ ಪೂತಾರಿಯಲ್ಲಿನ ಎಸ್ಆರ್ಎಂ ವಿಶ್ವವಿದ್ಯಾಲಯದಲ್ಲಿ ಎರಡು ವಿದ್ಯಾರ್ಥಿಗಳ ಗುಂಪು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಎರಡು ಗ್ಯಾಂಗ್ನ ಮುಖಂಡರು ಭಾಗಿಯಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಕೆಲ ವಿದ್ಯಾರ್ಥಿಗಳನ್ನ ವಶಕ್ಕೆ ಪಡೆದುಕೊಂಡಿದ್ದು, ಅವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕಳೆದ ವರ್ಷ ಕೂಡ ಇಂತಹ ಘಟನೆ ಈ ವಿಶ್ವವಿದ್ಯಾಲಯದಲ್ಲಿ ನಡೆದಿತ್ತು. ರೌಡಿಶೀಟರ್ ಒಬ್ಬನ ಹುಟ್ಟುಹಬ್ಬವನ್ನ ಕಾಲೇಜಿನಲ್ಲಿ ಆಚರಣೆ ಮಾಡುತ್ತಿದ್ದ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು.