ಹೈದರಾಬಾದ್: ದೇಶದಲ್ಲಿ ಬರುವ ಏಪ್ರಿಲ್ 14ರವರೆಗೆ ಲಾಕ್ಡೌನ್ ಆದೇಶ ಹೊರಡಿಸಲಾಗಿದ್ದು, ಅದು ಮುಕ್ತಾಯಗೊಳ್ಳಲು 8 ದಿನ ಬಾಕಿ ಇದೆ. ಇದರ ಬೆನ್ನಲ್ಲೇ ತೆಲಂಗಾಣ ಸಿಎಂ ದೇಶದ ಜನರಿಗೆ ಮತ್ತೊಂದು ಶಾಕ್ ನೀಡುವಂತಹ ಹೇಳಿಕೆ ನೀಡಿದ್ದಾರೆ.
ಏಪ್ರಿಲ್ 14ರಿಂದ ಜೂನ್ 3ರವರೆಗೆ ದೇಶದಲ್ಲಿ ಲಾಕ್ಡೌನ್ ಆದೇಶ ಮುಂದುವರಿಸುವುದು ಒಳ್ಳೆಯದು ಎಂದು ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಕೊರೊನಾ ವೈರಸ್ನಿಂದ ಸಂಫೂರ್ಣವಾಗಿ ಹೊರ ಬರಬೇಕಾದರೆ ಈ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.
ತೆಲಂಗಾಣದಲ್ಲಿ ಇಲ್ಲಿಯವರೆಗೆ 364 ಕೊರೊನಾ ಪ್ರಕರಣ ದಾಖಲಾಗಿದ್ದು, ಅದರಲ್ಲಿ 308 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 11 ಮಂದಿ ಸಾವನ್ನಪ್ಪಿದ್ದು, 45 ಜನರು ಡಿಸ್ಚಾರ್ಜ್ ಆಗಿದ್ದಾರೆ.