ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿವೆ. ಈಗಾಗಲೇ ರಾಜ್ಯದಲ್ಲಿ 90,787 ಕೇಸ್ ಕಾಣಿಸಿಕೊಂಡಿದ್ದು, ಮುಂಬೈನಲ್ಲೇ 51 ಸಾವಿರಕ್ಕೂ ಅಧಿಕ ಪ್ರಕರಣಗಳು ಸಿಕ್ಕಿವೆ.
ರಾಜ್ಯದ ಜನರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಲಾಕ್ಡೌನ್ ನಿಯಮ ಸರಿಯಾಗಿ ಪಾಲನೆ ಮಾಡದ ಕಾರಣ ಜೂನ್ 30ರ ಬಳಿಕ ಕೂಡ ರಾಜ್ಯದಲ್ಲಿ ಲಾಕ್ಡೌನ್ ನಿಯಮ ಜಾರಿಗೊಳಿಸುವುದು ಬಹುತೇಕ ಖಚಿತವಾಗಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ರಾಜ್ಯದ ಜನರು ಲಾಕ್ಡೌನ್ ನಿಯಮ ಸರಿಯಾಗಿ ಪಾಲನೆ ಮಾಡದ ಕಾರಣ ಇದನ್ನ ವಿಸ್ತರಣೆ ಮಾಡುವುದು ಅನಿವಾರ್ಯವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ ಇಂದು ಕೂಡ 3254 ಕೋವಿಡ್ ಪ್ರಕರಣ ಕಾಣಿಸಿಕೊಂಡಿದ್ದು, 149 ಜನರು ಸಾವನ್ನಪ್ಪಿದ್ದಾರೆ.