ETV Bharat / bharat

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ತನಿಖೆಗೆ ಆದೇಶಿಸಿದ ಸಿಎಂ.. ಪರಿಹಾರ ಘೋಷಿಸಿದ ಪಿಎಂ - ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಅಹಮದಾಬಾದ್​ನ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಪಟ್ಟಂತೆ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾನಿ ತನಿಖೆಗೆ ಆದೇಶಿಸಿದ್ದಾರೆ. ದುರ್ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

PM announces ex-gratia
ಸಿಎಂ -ಪಿಎಂ
author img

By

Published : Aug 6, 2020, 10:45 AM IST

Updated : Aug 6, 2020, 10:58 AM IST

ಅಹಮದಾಬಾದ್: ಇಲ್ಲಿನ ನವರಂಗ್​ಪುರದ ಶ್ರೇಯ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಪಟ್ಟಂತೆ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾನಿ ತನಿಖೆಗೆ ಆದೇಶಿಸಿದ್ದಾರೆ.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಗೀತಾ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಸಿಎಂ ಸೂಚಿಸಿದ್ದಾರೆ.

ದುರ್ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಿಎಂ ವಿಜಯ್​ ರೂಪಾನಿ ಹಾಗೂ ಮೇಯರ್ ಬಿಜಾಲ್ ಪಟೇಲ್ ಅವರೊಂದಿಗೆ ಮಾತನಾಡಿದ್ದಾರೆ. ಹಾಗೆಯೇ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಇಂದು ಮುಂಜಾನೆ 3.30 ರ ಸುಮಾರಿಗೆ ನಡೆದ ಘಟನೆಯಲ್ಲಿ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿ 8 ರೋಗಿಗಳು ಮೃತಪಟ್ಟಿದ್ದಾರೆ. ಒಬ್ಬ ವೈದ್ಯಕೀಯ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ.

ನಾಲ್ಕು ಅಂತಸ್ತಿನ ಆಸ್ಪತ್ರೆ ಇದಾಗಿದ್ದು, ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ಒಟ್ಟು 49 ಕೋವಿಡ್​ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇತರ 41 ಕೋವಿಡ್​ ರೋಗಿಗಳನ್ನು ರಕ್ಷಿಸಲಾಗಿದ್ದು, ಎಸ್​​ವಿಪಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಯು ಎನ್​ಒಸಿ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣಪತ್ರ ಹೊಂದಿಲ್ಲ ಎಂದು ಅಗ್ನಿ ಶಾಮಕ ದಳದ ಮುಖ್ಯಸ್ಥ ಮಾಹಿತಿ ನೀಡಿದ್ದಾರೆ. ಇನ್ನು ಆಸ್ಪತ್ರೆ ಮುಖ್ಯಸ್ಥರನ್ನು ವಶಕ್ಕೆ ಪಡೆದಿರುವ ಪೊಲೀಸರು ನವರಂಗ್​ಪುರ ಠಾಣೆಗೆ ಕರೆದೊಯ್ದಿದ್ದಾರೆ.

Last Updated : Aug 6, 2020, 10:58 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.