ನವದೆಹಲಿ: ಕರಾವಳಿ ಕರ್ನಾಟಕ ಸೇರಿದಂತೆ ತಮಿಳುನಾಡು, ಪುದುಚೇರಿಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಲಕ್ಷದ್ವೀಪ, ಕೇರಳ ಹಾಗೂ ಮಾಹೆ(ಪುದುಚೇರಿ)ಯ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಒಡಿಶಾ, ಛತ್ತೀಸ್ಗಢ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿಯೂ ಇಂದು ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ನೈಋತ್ಯ ಮಾನ್ಸೂನ್ ನಿಧಾನವಾಗಿ ಕ್ಷೀಣಿಸುತ್ತಿದ್ದು, ಇದಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ ಹಾಗೂ ಮುಂದಿನ 24 ಗಂಟೆಗಳ ಕಾಲ ದೇಶದ ಕರಾವಳಿ ಭಾಗಗಳಲ್ಲಿ ಮಳೆಯ ತುಸು ಹೆಚ್ಚಿರಲಿದೆ ಎಂದು ಇಲಾಖೆ ಹೇಳಿದೆ.