ನವದೆಹಲಿ: ಕೊರೊನಾ ಹರಡದಂತೆ ತಡೆಯಲು ಕೆಲವು ರಾಜ್ಯಗಳನ್ನು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಲಾಕ್ ಡೌನ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದೇಶದ ಒಟ್ಟು 720ರಲ್ಲಿ 560 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮಧ್ಯಪ್ರದೇಶ, ಒಡಿಶಾ ರಾಜ್ಯಗಳಲ್ಲಿ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಲಾಗಿದ್ದು ಸುಮಾರು 58 ಜಿಲ್ಲೆಗಳನ್ನು ಸ್ತಬ್ಧಗೊಳಿಸಲಾಗಿದೆ.
ಇನ್ನೂ ಹಲವು ರಾಜ್ಯಗಳನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿಲ್ಲ. ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಜನರ ಚಟುವಟಿಕೆಗಳು ಹೆಚ್ಚಾದ ಕಾರಣದಿಂದ ಲಾಕ್ ಡೌನ್ ವ್ಯಾಪ್ತಿಗೆ ಒಳಪಡಿಸಲಾಗಿದೆ. ದೇಶದಲ್ಲಿ ಮಿಜೋರಾಂ ಹಾಗೂ ಸಿಕ್ಕಿಂ ರಾಜ್ಯಗಳನ್ನು ಹೊರತುಪಡಿಸಿ ಇನ್ನೆಲ್ಲಾ ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಕೊರೊನಾ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 446 ಮಂದಿ ಸೋಂಕಿತರು ಪತ್ತೆಯಾದ ಕಾರಣದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಲಾಕ್ ಡೌನ್ ಘೋಷಣೆಯಾದ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳ ಹೊರತಾಗಿ ಎಲ್ಲವೂ ಸ್ತಬ್ಧಗೊಳ್ಳಲಿದೆ.