ನವದೆಹಲಿ: ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
"ರಾಹುಲ್ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗ ಬೇಕು ಎಂಬುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಭಾವನೆ. ಆದರೆ ಇಂದಿನ ಸಭೆಯಲ್ಲಿ ಚೀನಾದ ದಾಳಿ, ಇಂಧನ ಬೆಲೆ ಏರಿಕೆ ಮತ್ತು ಸಾಂಕ್ರಾಮಿಕ ರೋಗದ ಪರಿಸ್ಥಿತಿಗಳ ಬಗ್ಗೆ ಚರ್ಚೆಯಾಗಿದೆ" ಎಂದು ಪಕ್ಷದ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದರು.
"ರಾಹುಲ್ ಗಾಂಧಿ ಅವರನ್ನು ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದರು.
2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತ ಬಳಿಕ ರಾಹುಲ್ ಗಾಂಧಿ ಈ ಹುದ್ದೆಯನ್ನು ತ್ಯಜಿಸಿದ್ದರು. ಕಳೆದ ಆಗಸ್ಟ್ನಲ್ಲಿ ಸೋನಿಯಾ ಗಾಂಧಿ ಅವರನ್ನು ಮತ್ತೆ ಕಾಂಗ್ರೆಸ್ನ ಅಧ್ಯಕ್ಷರನ್ನಾಗಿ ಮಾಡಲಾಯಿತು.