ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬುಡವನ್ನೇ ಅಲುಗಾಡಿಸಿ, ಪತನಗೊಳ್ಳಲು ಕಾರಣರಾಗಿ ಅನರ್ಹಗೊಂಡ 14 ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣ ಕೆಪಿಸಿಸಿ ಶಿಫಾರಸ್ಸಿನಂತೆ 14 ಮಂದಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![mla expel](https://etvbharatimages.akamaized.net/etvbharat/prod-images/3993425_ggggk.jpg)
ಬಂಡಾಯವೆದ್ದು ರಾಜೀನಾಮೆ ನೀಡಿ, ಶಾಸಕ ಸ್ಥಾನ ಕಳೆದುಕೊಂಡ ಮಹೇಶ್ ಕುಮಟಳ್ಳಿ, ಶ್ರೀಮಂತ್ ಬಿ. ಪಾಟೀಲ್ , ರಮೇಶ್ ಜಾರಕಿಹೊಳಿ, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಆನಂದ್ ಸಿಂಗ್, ಡಾ.ಕೆ ಸುಧಾಕರ್, ಬೈರತಿ ಬಸವರಾಜು, ಎಸ್.ಟಿ ಸೋಮಶೇಖರ್, ಮುನಿರತ್ನ, ಆರ್.ರೋಷನ್ ಬೇಗ್, ಎಂಟಿಬಿ ನಾಗರಾಜ್ ಹಾಗೂ ಕಾಂಗ್ರೆಸ್ ಜೊತೆ ಕೆಪಿಜೆಪಿ ವಿಲೀನಗೊಳಿಸಿದ್ದ ಪಕ್ಷೇತರ ಶಾಸಕ ಆರ್. ಶಂಕರ್ ಅವರನ್ನೂ ಪಕ್ಷದಿಂದ ಹೊರದೂಡಲಾಗಿದೆ.