ನವದೆಹಲಿ: ಕೆಲ ದಿನಗಳ ಹಿಂದೆ ಮೋದಿ ಸರ್ಕಾರ ಒಂದಷ್ಟು ನಿರ್ಧಾರಗಳನ್ನು ಬೆಂಬಲಿಸಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಾತಿಗೆ ಇದೀಗ ಮತ್ತೋರ್ವ 'ಕೈ' ನಾಯಕ ಸಹಮತ ಸೂಚಿಸಿದ್ದಾರೆ.
ಪ್ರತಿಯೊಂದು ಸಂದರ್ಭದಲ್ಲೂ ಪ್ರಧಾನಿ ಮೋದಿ ಅವರನ್ನು ರಾಕ್ಷಸೀಕರಣಗೊಳಿಸುವುದು ತಪ್ಪು ಎಂದಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಪ್ರಧಾನಿ ಹುದ್ದೆಯಲ್ಲಿರುವವರು ದೇಶವನ್ನು ಪ್ರತಿನಿಧಿಸುತ್ತಾರೆ. ಆ ಸ್ಥಾನದಲ್ಲಿರುವ ವ್ಯಕ್ತಿಯ ನಿರ್ಧಾರಗಳು ಉತ್ತಮವಾಗಿರಬಹುದು ಅಥವಾ ಕೆಟ್ಟದಾಗಿರಬಹುದು. ಆದರೆ, ಅದನ್ನು ಖಂಡಿಸುವ ಮೊದಲು ಯೋಚನೆ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
-
Always said demonising #Modi wrong. No only is he #PM of nation, a one way opposition actually helps him. Acts are always good, bad & indifferent—they must be judged issue wise and nt person wise. Certainly, #ujjawala scheme is only one amongst other good deeds. #Jairamramesh
— Abhishek Singhvi (@DrAMSinghvi) August 23, 2019 " class="align-text-top noRightClick twitterSection" data="
">Always said demonising #Modi wrong. No only is he #PM of nation, a one way opposition actually helps him. Acts are always good, bad & indifferent—they must be judged issue wise and nt person wise. Certainly, #ujjawala scheme is only one amongst other good deeds. #Jairamramesh
— Abhishek Singhvi (@DrAMSinghvi) August 23, 2019Always said demonising #Modi wrong. No only is he #PM of nation, a one way opposition actually helps him. Acts are always good, bad & indifferent—they must be judged issue wise and nt person wise. Certainly, #ujjawala scheme is only one amongst other good deeds. #Jairamramesh
— Abhishek Singhvi (@DrAMSinghvi) August 23, 2019
ವ್ಯಕ್ತಿಗತವಾಗಿ ಹೇಳಿಕೆ ನೀಡುವುದು ಸರಿಯಲ್ಲ, ಮೋದಿ ಸರ್ಕಾರದ ಉಜ್ವಲ ಒಂದು ಅತ್ಯುತ್ತಮ ಯೋಜನೆ ಎಂದು ಇದೇ ವೇಳೆ ಅಭಿಷೇಕ್ ಮನು ಸಿಂಘ್ವಿ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಜೈರಾಮ್ ರಮೇಶ್ ಹೇಳಿಕೆಯಲ್ಲೇನಿತ್ತು..?
ಬುಧವಾರದಂದು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಮೋದಿ ಸರ್ಕಾರದ ಪ್ರತಿಯೊಂದು ನಿರ್ಧಾರವನ್ನು ಟೀಕಿಸುತ್ತಾ, ಋಣಾತ್ಮಕ ಕಥೆಗಳನ್ನು ಹೇಳುತ್ತಿದ್ದರೆ ದೇಶದ ಉದ್ಧಾರ ಸಾಧ್ಯವಿಲ್ಲ ಎಂದಿದ್ದರು.