ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಅಭಿಷೇಕ್ ಸಿಂಘ್ವಿ ಇದೀಗ ಕೊರೊನಾ ಸೋಂಕಿಗೊಳಗಾಗಿದ್ದು, ಮನೆಯಲ್ಲೇ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
ಅವರಲ್ಲಿ ಕೋವಿಡ್ ಲಕ್ಷಣಗಳಾದ ಜ್ವರ, ನೆಗಡಿ ಕಾಣಿಸಿಕೊಂಡಿದ್ದರಿಂದ ಟೆಸ್ಟ್ ಮಾಡಿಸಿಕೊಂಡಿದ್ದು, ಈ ವೇಳೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ಹೀಗಾಗಿ ಸರ್ಕಾರದ ಸೂಚನೆಯಂತೆ ಹೋಂ ಕ್ವಾರಂಟೈನ್ಗೊಳಗಾಗಿದ್ದಾರೆ.
ಇನ್ನು ಇವರ ಮಗ, ಕುಟುಂಬಸ್ಥರು ಹಾಗೂ ಸಿಬ್ಬಂದಿಗೂ ಇದೀಗ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಈ ಹಿಂದೆ ಕಾಂಗ್ರೆಸ್ ಮುಖಂಡ ಸಂಜಯ್ ಜಾಗೆ ಕೊರೊನಾ ಕಾಣಿಸಿಕೊಂಡಿದ್ದು, ಇದರ ಬೆನ್ನಲ್ಲೇ ಮತ್ತೋರ್ವ ಕಾಂಗ್ರೆಸ್ ಮುಖಂಡನಿಗೆ ಮಹಾಮಾರಿ ತಗುಲಿದೆ.