ಇಂಧೋರ್ (ಮಧ್ಯಪ್ರದೇಶ) : ಕೃಷಿ ಕಾಯ್ದೆಗಳ ವಿರುದ್ಧ ಸುಮಾರು 24 ಪಕ್ಷಗಳ ಜಂಟಿ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಳಿ ತೆರಳಿದೆ. ಈ ಸಭೆಯಿಂದ ಯಾವುದೇ ಉಪಯೋಗವಾಗುವ ಭರವಸೆಯಿಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಕೃಷಿ ಕಾಯ್ದೆಗಳ ವಿರುದ್ಧ ರಾಜಕೀಯ ಪಕ್ಷಗಳು ರಾಷ್ಟ್ರಪತಿಯನ್ನು ಭೇಟಿ ಮಾಡಲಿವೆ. ಉಳಿದ ರಾಜಕೀಯ ಪಕ್ಷಗಳೊಂದಿಗೆ ಚರ್ಚೆ ನಡೆಸಿ ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಧಾನಿ ಮೋದಿ ಮೇಲೆ ಒತ್ತಡ ತರಬೇಕು ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕೃಷಿ ಕಾಯ್ದೆಗಳ ತಿದ್ದುಪಡಿ ಪ್ರಸ್ತಾವ ಸಲ್ಲಿಸಿದ ಕೇಂದ್ರ : ರೈತ ಸಂಘಟನೆಗಳು ಒಪ್ತಾವಾ?
ಈ ಬಗ್ಗೆ ಮಾತನಾಡಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸೀತಾರಾಮ್ ಯೆಚೂರಿ, ತಮ್ಮ ಪಕ್ಷದ ಹೊರತಾಗಿ ಕಾಂಗ್ರೆಸ್, ಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳ ಜಂಟಿ ನಿಯೋಗವು ಕೇಂದ್ರದ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಿದ್ದಾರೆ.
ಈ ಜಂಟಿ ನಿಯೋಗದಲ್ಲಿ ರಾಹುಲ್ ಗಾಂಧಿ, ಶರದ್ ಪವಾರ್ ಸೇರಿ ಹಲವಾರು ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಸೀತಾರಾಮ್ ಯೆಚೂರಿ ಹೇಳಿದ್ದಾರೆ. ಕೊರೊನಾ ಮಾರ್ಗಸೂಚಿ ಹಿನ್ನೆಲೆ ಐದಕ್ಕಿಂತ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಳ್ಳಬಾರದೆಂಬ ನಿಯಮವಿದೆ. ಈ ನಿಯಮ ಸಡಿಲಿಸಿ 11 ಮಂದಿಗೆ ಅವಕಾಶ ನೀಡಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.