ಕೇರಳ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕೇರಳದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ, ಇಂದು ಕೊಯಿಕ್ಕೋಡ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಹುಲ್ ಗಾಂಧಿಗೆ ರಾಜ್ಯ ನಾಯಕರು ಅದ್ಧೂರಿ ಸ್ವಾಗತ ಕೋರಿದರು.
ರಾಜ್ಯದಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ಘೋಷಣೆ ಆಗಲಿದ್ದು, ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ವಿವಿಧೆಡೆ ನಡೆಯಲಿರುವ ಪಕ್ಷದ ಱಲಿಗಳಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ.