ನವದೆಹಲಿ: ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಸಿಂಘು ಗಡಿಯಲ್ಲಿ ಪಂಜಾಬ್, ಹರಿಯಾಣ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಈ ನಡುವೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಮಾಧ್ಯಮಗೋಷ್ಟಿ ನಡೆಸಿದರು.
ಟ್ರ್ಯಾಕ್ಟರ್ ರ‍್ಯಾಲಿಗೆ ಅನುಮತಿ ನೀಡುವ ಸಂಬಂಧ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಮಧ್ಯೆ ರೈತರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡಿದೆ.
ಇಂದು ರಾಹುಲ್ ಗಾಂಧಿ ಈ ಸಂಬಂಧ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದರು. ಅಷ್ಟೇ ಅಲ್ಲ ಕೇಂದ್ರ ಜಾರಿಗೆ ತಂದಿರುವ ಮೂರು ಕಾನೂನಗಳ ಬಗ್ಗೆ ಕಾಂಗ್ರೆಸ್ ಪುಸ್ತಕಗಳನ್ನ ಸಹ ಬಿಡುಗಡೆ ಮಾಡಿದೆ. ಈ ಮೂಲಕ ರೈತ ವಿರೋಧಿ ಕಾನೂನುಗಳ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಕೃಷಿ ಕಾಯ್ದೆ ರದ್ಧತಿ ಬದಲು ಪರ್ಯಾಯ ಕ್ರಮದ ಕುರಿತು ಚಿಂತನೆ: ಸಚಿವ ತೋಮರ್