ರಾಯಬರೇಲಿ: ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನದ ಆರ್ಟಿಕಲ್ 370 ಹಾಗೂ ಆರ್ಟಿಕಲ್ 35 ಎ ಎರಡನ್ನೂ ವಾಪಸ್ ಪಡೆಯಲಾಗಿದೆ. ಈ ನಿರ್ಧಾರಕ್ಕೆ ಸಂಸತ್ನಲ್ಲಿ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಮಧ್ಯೆ ರಾಯಬರೇಲಿಯ ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್ ಕೇಂದ್ರ ಸರ್ಕಾರಕ್ಕೆ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ.
-
#WATCH Aditi Singh, Congress MLA Raebareli Sadar speaks on #Article370revoked: I'm in absolute support of the decision. It will help in integrating J&K into the mainstream. It's a historic decision. It should not be politicised. As an MLA, in my capacity, I welcome this decision. pic.twitter.com/fSmzpesjnB
— ANI UP (@ANINewsUP) August 6, 2019 " class="align-text-top noRightClick twitterSection" data="
">#WATCH Aditi Singh, Congress MLA Raebareli Sadar speaks on #Article370revoked: I'm in absolute support of the decision. It will help in integrating J&K into the mainstream. It's a historic decision. It should not be politicised. As an MLA, in my capacity, I welcome this decision. pic.twitter.com/fSmzpesjnB
— ANI UP (@ANINewsUP) August 6, 2019#WATCH Aditi Singh, Congress MLA Raebareli Sadar speaks on #Article370revoked: I'm in absolute support of the decision. It will help in integrating J&K into the mainstream. It's a historic decision. It should not be politicised. As an MLA, in my capacity, I welcome this decision. pic.twitter.com/fSmzpesjnB
— ANI UP (@ANINewsUP) August 6, 2019
ಈ ಬಗ್ಗೆ ಮಾತನಾಡಿದ ಅವರು, ನಾನು ಈ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಜಮ್ಮು ಕಾಶ್ಮೀರವನ್ನು ಮುಖ್ಯವಾಹಿನಿಗೆ ತರಲು ಇದು ಸಹಾಯಕವಾಗುತ್ತದೆ. ಅಷ್ಟೇ ಅಲ್ಲದೆ, ಇದು ಐತಿಹಾಸಿಕ ನಿರ್ಧಾರವಾಗಿದೆ. ಇದನ್ನು ರಾಜಕೀಯಗೊಳಿಸಬಾರದು. ನಾನು ಓರ್ವ ಶಾಸಕಿಯಾಗಿ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಆಗಸ್ಟ್ 5ರಂದು ಆರ್ಟಿಕಲ್ 370 ರದ್ದತಿ ವಿಷಯ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. ಈ ಬಗ್ಗೆ ಸಾಕಷ್ಟು ಪರ ವಿರೋಧಗಳೂ ಕೇಳಿ ಬಂದಿದ್ದು, ಇಂದು ಈ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆ ನಡೆಯುತ್ತಿದೆ.