ಭೋಪಾಲ್: ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕ ಹರ್ದೀಪ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.
ಮಧ್ಯಪ್ರದೇಶ ಸರ್ಕಾರ ಉರುಳಿಸಲು ಬಿಜೆಪಿ ರೆಸಾರ್ಟ್ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ದೂರುತ್ತಿರುವ ಮಧ್ಯೆ ಹರ್ದೀಪ್ ಸಿಂಗ್ ಅವರು ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ಅವರಿಗೆ ಗುರುವಾರ ರಾತ್ರಿ ರಾಜೀನಾಮೆ ಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ.
ಎರಡನೇ ಬಾರಿ ಶಾಸಕನಾಗಿ ಆಯ್ಕೆ ಆದ್ರೂ ಯಾವುದೇ ಸಚಿವ ಸ್ಥಾನ ನೀಡಿಲ್ಲ. ಅದಕ್ಕಾಗಿ ರಾಜೀನಾಮೆ ಸಲ್ಲಿಸಿದ್ದಾಗಿ ಹರ್ದೀಪ್ ಸಿಂಗ್ ಹೇಳಿದ್ದಾರೆ.
ಈಗಾಗಲೇ 10 ಜನ ಶಾಸಕರನ್ನು ಬಿಜೆಪಿ ಕರೆದೊಯ್ದಿತ್ತು. ಅದರಲ್ಲಿ ಆರು ಶಾಸಕರು ಮರಳಿದ್ದು, ನಾಲ್ವರು ಇನ್ನೂ ಬರಬೇಕಿದೆ ಎಂದು ಕಾಂಗ್ರೆಸ್ ದೂರಿದೆ. ಈ ಮಧ್ಯೆ ಕಾಂಗ್ರೆಸ್ನ ಕೆಲ ಶಾಸಕರು ಬೆಂಗಳೂರಿಗೆ ಬಂದಿರುವುದು ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ತಲೆನೋವಾಗಿದೆ.