ದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಲೋಕಸಭಾ ಸಂಸದರ ಸಭೆ ಕರೆಯಲಾಗಿದೆ. ಇವತ್ತು ಸಭೆ ನಿಗದಿಯಾಗಿದ್ದು ಪಕ್ಷದಿಂದ ಆಯ್ಕೆಯಾದ ಎಲ್ಲಾ 52 ಸಂಸದರು ಭಾಗಿಯಾಗಲಿದ್ದಾರೆ. 370ನೇ ವಿಧಿ ರದ್ದತಿ ಹಾಗು ಇನ್ನಿತರ ಮಹತ್ವದ ವಿಚಾರಗಳ ಬಗ್ಗೆ ಮುಂದಿನ ಹೋರಾಟದ ರೂಪುರೇಷೆಯ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ಮತ್ತು ಆ ರಾಜ್ಯದಲ್ಲಿ ಜಮೀನು ಖರೀದಿ ಸಂಬಂಧಕ್ಕೆ ತೊಡಕಾಗಿದ್ದ 35 (A)ಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. ಈ ನಿರ್ಧಾರಕ್ಕೆ ಈಗಾಗಲೇ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಅಸಮಾಧಾನ ಮತ್ತು ವಿರೋಧ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಸಂಸದರು ಒಕ್ಕೊರಳಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಿರ್ಧಾರದ ವಿರುದ್ಧ ಹೋರಾಟದ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.
370 ವಿಧಿ ರದ್ದತಿ ಬಗ್ಗೆ ಪ್ರತಿಕ್ರಿಯೆ ನೀಡದ ರಾಹುಲ್:
ಇನ್ನು, 370ನೇ ವಿಧಿ ರದ್ದು ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.