ETV Bharat / bharat

ಕಾಂಗ್ರೆಸ್​​​​​​ ಹೈಕಮಾಂಡ್​​​​​​​​ನಲ್ಲಿ ಬಿರುಗಾಳಿ: ಸಿಡಬ್ಲ್ಯೂಸಿಯಲ್ಲಿ ಅಮೂಲಾಗ್ರ ಬದಲಾವಣೆ ಚರ್ಚೆ

ನಮ್ಮ ಮುಖಂಡರು ಬಿಜೆಪಿಯೊಂದಿಗೆ ತಂತ್ರ ರೂಪಿಸಿದ್ದಾರೆ ಎಂಬ ರಾಹುಲ್​ ಆರೋಪಕ್ಕೆ ಕಾಂಗ್ರೆಸ್​ ನಾಯಕರು ಆಕ್ರೋಶಗೊಂಡಿದ್ದು, ರಾಗಾ ಆರೋಪ ಸಾಬೀತಾದರೆ ರಾಜೀನಾಮೆ ನೀಡುವೆ ಎಂದು ಗುಲಾಬ್​ ನಬಿ ಆಜಾದ್​ ಹೇಳಿದ್ದಾರೆ. ಇನ್ನೊಂದೆಡೆ, ನಾನು ಕಳೆದ 30 ವರ್ಷದಲ್ಲಿ ಬಿಜೆಪಿ ಪರವಾಗಿ ಒಂದೇ ಒಂದು ಹೇಳಿಕೆ ನೀಡಿಲ್ಲ. ಆದರೂ ರಾಹುಲ್​ ಗಾಂಧಿ ಹೀಗೆ ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್​ ನಾಯಕ ಕಪಿಲ್​ ಸಿಬಲ್​ ಟ್ವೀಟ್​ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

author img

By

Published : Aug 24, 2020, 1:55 PM IST

Congress
ಸಿಡಬ್ಲ್ಯೂ ಸಭೆ

ನವದೆಹಲಿ: ಭಾರತದ ಹಳೆಯ ಪಕ್ಷವಾದ ಕಾಂಗ್ರೆಸ್​ನಲ್ಲಿ ನಾಯಕತ್ವದ ಬಿಕ್ಕಟ್ಟು ಎದುರಾಗಿದೆ. ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನಾಯಕತ್ವದಿಂದ ಹಿಂದೆ ಸರಿದಿದ್ದು, ಇಂದು ನಡೆಯುತ್ತಿರುವ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷಕ್ಕೆ ನೂತನ ಸಾರಥಿ ಆಯ್ಕೆಯಾಗುವ ಸಾಧ್ಯತೆಯಿದೆ.

ವಿಡಿಯೋ ಕಾನ್ಫರೆನ್ಸ್​ ಮೂಲಕ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು, ಪಕ್ಷದ ಹಿರಿಯ ನಾಯಕರಾದ ಮನಮೋಹನ್ ಸಿಂಗ್, ಪ್ರಿಯಾಂಕಾ ಗಾಂಧಿ ವಾದ್ರಾ, ಅಮರಿಂದರ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸೋನಿಯಾ ಗಾಂಧಿ ನೇತೃತ್ವದಲ್ಲಿ ನಭೆ ನಡೆಯುತ್ತಿದ್ದು, ಪಕ್ಷಕ್ಕೆ ನೂತನ ಸಾರಥಿಯನ್ನು ಆಯ್ಕೆ ಮಾಡಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಆದರೆ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರೆಯುವಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ರಕ್ಷಣಾ ಸಚಿವ ಎ ಕೆ ಆಂಟೋನಿ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರು ಒತ್ತಾಯಿಸಿದ್ದಾರೆ.

ನಮ್ಮ ಮುಖಂಡರು ಬಿಜೆಪಿಯೊಂದಿಗೆ ತಂತ್ರ ರೂಪಿಸಿದ್ದಾರೆ: ರಾಹುಲ್​ ಆರೋಪ : ಪಕ್ಷಕ್ಕೆ ದಕ್ಷ, ಪ್ರಭಾವಿ ಹಾಗೂ ಪೂರ್ಣಾವಧಿ ನಾಯಕತ್ವ ಬೇಕು ಎಂದು ಆಗ್ರಹಿಸಿ ಕಾಂಗ್ರೆಸ್​ ಹಿರಿಯ ನಾಯಕರ ಪತ್ರಕ್ಕೆ ರಾಹುಲ್​ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದು, ನಮ್ಮ ಮುಖಂಡರು ಬಿಜೆಪಿಯೊಂದಿಗೆ ತಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದಾಗ ಏಕೆ ಈ ವಿಚಾರ ಪ್ರಸ್ತಾಪ ಮಾಡಲಿಲ್ಲ? ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿರುವಾಗ ಏಕೆ ಪತ್ರ ಬರೆದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ರಾಹುಲ್​ ಆರೋಪ ಕಾಂಗ್ರೆಸ್​ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಂಗ್ರೆಸ್​ ನಾಯಕರ ಆಕ್ರೋಶ: ರಾಹುಲ್​ ಆರೋಪಕ್ಕೆ ಕಾಂಗ್ರೆಸ್​ ನಾಯಕರು ಕೂಡಾ ಆಕ್ರೋಶಗೊಂಡಿದ್ದು, ರಾಗಾ ಆರೋಪ ಸಾಬೀತಾದರೆ ರಾಜೀನಾಮೆ ನೀಡುವೆ ಎಂದು ಗುಲಾಬ್​ ನಬಿ ಆಜಾದ್​ ಹೇಳಿದ್ದಾರೆ. ಇನ್ನೊಂದೆಡೆ, ನಾನು ಕಳೆದ 30 ವರ್ಷದಲ್ಲಿ ಬಿಜೆಪಿ ಪರವಾಗಿ ಒಂದೇ ಒಂದು ಹೇಳಿಕೆ ನೀಡಿಲ್ಲ. ಆದರೂ ರಾಹುಲ್​ ಗಾಂಧಿ ಹೀಗೆ ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್​ ನಾಯಕ ಕಪಿಲ್​ ಸಿಬಲ್​ ಟ್ವೀಟ್​ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.