ನವದೆಹಲಿ: ದೇಶದಲ್ಲಿ ಕೊವಿಡ್-19 ತಂದಿಟ್ಟ ಬಿಕ್ಕಟ್ಟು ಹಾಗೂ ಕಾಯಿಲೆ ವಿರುದ್ಧ ಹೋರಾಡಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು ಏಪ್ರಿಲ್ 2 ರಂದು ರಾಷ್ಟ್ರೀಯ ಕಾಂಗ್ರೆಸ್, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಕ್ಷದ ಕಾರ್ಯಕಾರಿಣಿ ಸಭೆ ನಡೆಸಲಿದೆ.
ಸಭೆಯಲ್ಲಿ ಕೋವಿಡ್-19 ಬಿಕ್ಕಟ್ಟು, ಕೊರೊನಾ ಪರಿಸ್ಥಿತಿಗೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆ, ಪರಿಹಾರದ ಕ್ರಮಗಳ ಕುರಿತು ಹಾಗೂ ಕಾಂಗ್ರೆಸ್ ಪಕ್ಷವು ತನ್ನ ರಾಜ್ಯ ಘಟಕಗಳಿಗೆ ನೀಡಿದ ಕಾರ್ಯಗಳ ಪ್ರಗತಿ ಕುರಿತು ಚರ್ಚಿಸಲಾಗುವುದು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಎಲ್ಲಾ ಕೊವಿಡ್-19 ಸಂಬಂಧಿತ ವಿಷಯಗಳನ್ನು ಸಂಘಟಿಸಲು AICC ಯಲ್ಲಿ ಸೆಂಟ್ರಲ್ ಕಂಟ್ರೋಲ್ ರೂಂ ಸ್ಥಾಪಿಸಲು ಕಾಂಗ್ರೆಸ್ ನಿರ್ಧರಿಸಿದ್ದು, ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಲಾಕ್ಡೌನ್ ನಡುವೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕಾರಿಣಿ ಸಭೆ ನಡೆಸಲಿದೆ.