ನವೆದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಗೆ ಸಾಂಕ್ರಾಮಿಕ ರೋಗದ ಸೋಂಕು ತಗುಲಿದೆ.
ಟ್ರಾಫಿಕ್ ಪೊಲೀಸ್ ವಿಭಾಗದಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಆಗಿದ್ದ ಅಧಿಕಾರಿಗೆ ಸೋಂಕು ಕಾಣಿಸಿಕೊಂಡಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಸಂಪೂರ್ಣ ಕುಟುಂಬವನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ.
ಜ್ವರದಿಂದ ಬಳಲುತ್ತಿದ್ದ ಕಾರಣ ಎಎಸ್ಐ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ರಕ್ತದ ಮಾದರಿ ಪರೀಕ್ಷೆ ಮಾಡಿಸಿದ್ದು ಸೋಂಕು ದೃಢಪಟ್ಟಿದೆ.
ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ಸಾವಿನ ಸಂಖ್ಯೆ ಕೂಡ 9ಕ್ಕೇರಿದೆ.