ETV Bharat / bharat

ಕೋವಿಡ್​ ಹೆಚ್ಚಳ ಬೆನ್ನಲ್ಲೇ 'ಕೊರೊನಾ ಗಾನ್​ ದೀದಿ' ಎಂದ ಪ.ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ - ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಬಿಜೆಪಿ ರ್ಯಾಲಿ ನಡೆಸುವ ಕಾರಣಕ್ಕೆ ದೀದಿ ಸರ್ಕಾರ ಲಾಕ್​ಡೌನ್​ ಹೇರಿದೆ. ಆದರೆ 'ಕೊರೊನಾ ಗಾನ್​! ದೀದಿ' ಎಂದು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್

author img

By

Published : Sep 11, 2020, 1:07 PM IST

ಕೋಲ್ಕತಾ: ಕೊರೊನಾ ಸಾಂಕ್ರಾಮಿಕ ರೋಗ ಮುಗಿದಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. ಭಾರತದ ಕೆಲವು ಭಾಗಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಸಮಯದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.

ಹೂಗ್ಲಿ ಜಿಲ್ಲೆಯ ಧನಿಯಖಾಲಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರ್ಯಾಲಿ ನಡೆಸುವ ಕಾರಣಕ್ಕೆ ದೀದಿ ಸರ್ಕಾರ ಲಾಕ್​ಡೌನ್​ ಹೇರಿದೆ. ಆದರೆ 'ಕೊರೊನಾ ಗಾನ್​! ದೀದಿ' ಎಂದು ಘೋಷ್​ ಹೇಳಿದ್ದಾರೆ. ಇವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಹರಿದಾಡುತ್ತಿದೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಘೋಷ್, "ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರನ್ನು ನೋಡಿ ಮಮತಾ ಬ್ಯಾನರ್ಜಿ ಬೆಂಬಲಿಗರು ಭಯಪಟ್ಟಿದ್ದಾರೆ. ಇದು ಕೊರೊನಾ ಭಯವಲ್ಲ" ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಘೋಷ್​ ಈ ಹೇಳಿಕೆ ನೀಡಿರುವುದು ಅಚ್ಚರಿ ಮೂಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.