ETV Bharat / bharat

ದೇಶದಲ್ಲಿ 14 ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆ: 312 ಮಂದಿ ಬಲಿ - ಭಾರತದಲ್ಲಿ ಕೋವಿಡ್ 19

ಭಾರತ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ವಿಶ್ವದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, 24 ಗಂಟೆಯಲ್ಲಿ 14 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

corona
ಕೊರೊನಾ
author img

By

Published : Jun 23, 2020, 10:06 AM IST

ನವದೆಹಲಿ: ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಿದೆ. ಇದರ ಜೊತೆಗೆ ಈ ಮಹಾಮಾರಿ ಸೋಂಕಿಗೂ ಒಂದೇ ದಿನದಲ್ಲಿ ನೂರಾರು ಮಂದಿ ಬಲಿಯಾಗುತ್ತಿದ್ದಾರೆ. ಭರವಸೆಯ ಅಂಶವೆಂದರೆ ಚೇತರಿಕೆ ಕಾಣುತ್ತಿರುವವರ ಸಂಖ್ಯೆಯೂ ಕೂಡಾ ಏರುತ್ತಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 14,933 ಸೋಂಕಿತರು ಪತ್ತೆಯಾಗಿದ್ದು, 312 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,40,215ಕ್ಕೆ ಹಾಗೂ ಮೃತರ ಸಂಖ್ಯೆ 14,011ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 2,48,190 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 1,78,014 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈಗ ಸದ್ಯಕ್ಕೆ ವಿಶ್ವದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಅಮೆರಿಕ, ಬ್ರೆಜಿಲ್​, ರಷ್ಯಾ ಕ್ರಮವಾಗಿ ತಲಾ ಮೊದಲ ಮೂರು ಸ್ಥಾನಗಳಲ್ಲಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.