ಮುಂಬೈ: ಮಹಾರಾಷ್ಟ್ರ ಹಾಗೂ ಮುಂಬೈನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ಸೊಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯ ಸಿಯಾನ್ ಆಸ್ಪತ್ರೆಯಲ್ಲಿ ಕೊರೊನಾದಿಂದ ಮೃತಪಟ್ಟ ಶವಗಳ ಪಕ್ಕದಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಾಸಕ ನಿತೇಶ್ ರಾಣೆ ವಿಡಿಯೋವೊಂದನ್ನು ಬಹಿರಂಗಪಡಿಸಿದ್ದಾರೆ.
ಸೋಂಕಿಗೊಳಗಾದ ನೂರಾರು ರೋಗಿಗಳು ಮುಂಬೈನಲ್ಲಿ ನಿತ್ಯ ಚಿಕಿತ್ಸೆ ಪಡೆಯುತ್ತಾರೆ. ಈಗಾಗಲೇ ಮುಂಬೈನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,527 ಕ್ಕೇರಿದ್ದು, ಸಾವಿನ ಸಂಖ್ಯೆ 412ಕ್ಕೆ ಏರಿದೆ. ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರಸಭೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಸ್ಥಳದ ಅಭಾವವುಂಟಾಗಿದೆ. ಇದರ ನಡುವೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಪರಿಣಾಮವಾಗಿ, ಸೋಂಕಿತ ರೋಗಿಗಳಿಗೆ ಕೊರೊನಾದಿಂದಲೇ ಸಾವನ್ನಪ್ಪಿದ ಶವಗಳ ಪಕ್ಕದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
-
In Sion hospital..patients r sleeping next to dead bodies!!!
— nitesh rane (@NiteshNRane) May 6, 2020 " class="align-text-top noRightClick twitterSection" data="
This is the extreme..what kind of administration is this!
Very very shameful!! @mybmc pic.twitter.com/NZmuiUMfSW
">In Sion hospital..patients r sleeping next to dead bodies!!!
— nitesh rane (@NiteshNRane) May 6, 2020
This is the extreme..what kind of administration is this!
Very very shameful!! @mybmc pic.twitter.com/NZmuiUMfSWIn Sion hospital..patients r sleeping next to dead bodies!!!
— nitesh rane (@NiteshNRane) May 6, 2020
This is the extreme..what kind of administration is this!
Very very shameful!! @mybmc pic.twitter.com/NZmuiUMfSW
ಈ ಬಗ್ಗೆ ವಿಡಿಯೋ ಶೇರ್ ಮಾಡಿ ಟ್ವೀಟ್ ಮಾಡಿರುವ ಶಾಸಕ ನಿತೇಶ್ ರಾಣೆ. ಇದು ಸಿಯಾನ್ ಆಸ್ಪತ್ರೆಯ ದೃಶ್ಯ. ಕೊರೊನಾ ಶವಗಳ ಪಕ್ಕದಲ್ಲೇ ಕೊರೊನಾ ಸೋಂಕಿತರು ಮಲಗಿದ್ದಾರೆ. ಇದು ಅತಿಯಾಯ್ತು. ಇದು ಯಾವ ರೀತಿಯ ಆಡಳಿತ? ನಿಜಕ್ಕೂ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.