ನವದೆಹಲಿ: ಕೊರೊನಾ ವೈರಸ್ ವಿರುದ್ಧ ಯುದ್ಧದಲ್ಲಿ ಮುಂಚೂಣಿಯಲ್ಲಿ ಹೋರಾಡುತ್ತಿರುವ ಲಕ್ಷಾಂತರ ವೈದ್ಯರು, ದಾದಿಯರು ಮತ್ತು ಇತರ ಅರೆವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಕೇಂದ್ರ ಮುಂದಾಗಿದೆ. ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವ ಅಪರಾಧಿಗಳಿಗೆ ದಂಡ ವಿಧಿಸಲು ಮತ್ತು ಅವರಿಂದ ಉಂಟಾದ ಹಾನಿಗಳನ್ನು ಮರುಪಡೆಯಲು ಸುಗ್ರೀವಾಜ್ಞೆ ತರಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 1897ರ ಸಾಂಕ್ರಾಮಿಕ ರೋಗ ಕಾಯ್ದೆಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
-
Amendment to be made to Epidemic Diseases Act, 1897 and Ordinance will be implemented. Such crime will now be cognizable & non-bailable. Investigation will be done within 30 days. Accused can be sentenced from 3 months-5 yrs & penalised from Rs 50,000 upto Rs 2 Lakh: P Javadekar https://t.co/x3B5vjYZ8s
— ANI (@ANI) April 22, 2020 " class="align-text-top noRightClick twitterSection" data="
">Amendment to be made to Epidemic Diseases Act, 1897 and Ordinance will be implemented. Such crime will now be cognizable & non-bailable. Investigation will be done within 30 days. Accused can be sentenced from 3 months-5 yrs & penalised from Rs 50,000 upto Rs 2 Lakh: P Javadekar https://t.co/x3B5vjYZ8s
— ANI (@ANI) April 22, 2020Amendment to be made to Epidemic Diseases Act, 1897 and Ordinance will be implemented. Such crime will now be cognizable & non-bailable. Investigation will be done within 30 days. Accused can be sentenced from 3 months-5 yrs & penalised from Rs 50,000 upto Rs 2 Lakh: P Javadekar https://t.co/x3B5vjYZ8s
— ANI (@ANI) April 22, 2020
ಈ ಸುಗ್ರೀವಾಜ್ಞೆ ಪ್ರಕಾರ ವೈದ್ಯರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರ ಮೇಳೆ ದಾಳಿ ಅಥವಾ ಕಿರುಕುಳ ನೀಡಿದರೆ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗುತ್ತದೆ. ಮತ್ತು ಕಠಿಣ ಕಾರಾಗೃಹ ಶೀಕ್ಷೆ ಹಾಗೂ ನಷ್ಟದ ಹಾನಿ ಮರುಪಡೆಯಲು ಅವಕಾಶ ನೀಡಲಾಗಿದೆ.
'ಕಾನೂನಿನ ಪ್ರಕಾರ, 30 ದಿನಗಳಲ್ಲಿ ತನಿಖೆ ಪೂರ್ಣಗೊಳ್ಳುತ್ತದೆ, ಇನ್ಸ್‌ಪೆಕ್ಟರ್ ಮಟ್ಟದ ಅಧಿಕಾರಿಯೊಬ್ಬರು ತನಿಖೆ ಮಾಡುತ್ತಾರೆ ಮತ್ತು ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳ್ಳುತ್ತದೆ' ಎಂದು ಸಚಿವರು ಹೇಳಿದರು.
-
If damage is done to the vehicles or clinics of healthcare workers, then a compensation amounting to twice the market value of the damaged property will be taken from the accused: Union Minister Prakash Javadekar pic.twitter.com/XOM6tDP5QA
— ANI (@ANI) April 22, 2020 " class="align-text-top noRightClick twitterSection" data="
">If damage is done to the vehicles or clinics of healthcare workers, then a compensation amounting to twice the market value of the damaged property will be taken from the accused: Union Minister Prakash Javadekar pic.twitter.com/XOM6tDP5QA
— ANI (@ANI) April 22, 2020If damage is done to the vehicles or clinics of healthcare workers, then a compensation amounting to twice the market value of the damaged property will be taken from the accused: Union Minister Prakash Javadekar pic.twitter.com/XOM6tDP5QA
— ANI (@ANI) April 22, 2020
3 ತಿಂಗಳಿನಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ ಮತ್ತು ಗಂಭೀರ ಅಪರಾಧಗಳಿದ್ದಲ್ಲಿ ಜೈಲು ಶಿಕ್ಷೆ ಅವಧಿಯನ್ನು 6 ತಿಂಗಳಿಂದ 7 ವರ್ಷದವರೆಗೆ ವಿಸ್ತರಿಸಲಾಗುವುದು. ಕಡಿಮೆ ಗಂಭೀರ ಅಪರಾಧಗಳಿಗೆ 50 ಸಾವಿರದಿಂದ 2 ಲಕ್ಷ ರೂಪಾಯಿ ಮತ್ತು ಗಂಭೀರ ಅಪರಾಧಗಳಿಗೆ 1 ಲಕ್ಷದಿಂದ 5 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿರುತ್ತದೆ.
ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಆಸ್ತಿ ಅಥವಾ ವಾಹನಗಳಿಗೆ ಯಾವುದೇ ಹಾನಿ ಉಂಟುಮಾಡಿದರೆ ಅಪರಾಧಿಗಳಿಂದ ನಷ್ಟ ವಸೂಲಿ ಮಾಡಲಾಗುತ್ತದೆ. ವಸೂಲಿ ಮಾಡುವ ಪರಿಹಾರವು ಹಾನಿಗೊಳಗಾದ ಆಸ್ತಿ ಅಥವಾ ವಾಹನದ ಮಾರುಕಟ್ಟೆ ಮೌಲ್ಯಕ್ಕಿಂತ ಎರಡು ಪಟ್ಟು ಹೆಚ್ಚಾಗಿರುತ್ತದೆ ಎಂದು ಸಚಿವರು ಹೇಳಿದ್ದಾರೆ.