ETV Bharat / bharat

ಲಾಕ್​ಡೌನ್​ ಎಫೆಕ್ಟ್​ಗೆ ಕಾರ್ಮಿಕರ ಬೃಹತ್​ ವಲಸೆ: ವರದಿ ನೀಡಲು ಕೇಂದ್ರಕ್ಕೆ ಸುಪ್ರೀಂ ಸೂಚನೆ - ಸುಪ್ರೀಂ ಕೋರ್ಟ್​

ಲಾಕ್​ಡೌನ್​ ನಂತರದಲ್ಲಿ ಬೃಹತ್ ಪ್ರಮಾಣದಲ್ಲಿ ಕಾರ್ಮಿಕರು ನಗರಗಳಿಂದ ಗ್ರಾಮಾಂತರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ಕುರಿತು ವರದಿ ನೀಡಬೇಕೆಂದು ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

supreme court
ಸುಪ್ರೀಂಕೋರ್ಟ್​
author img

By

Published : Mar 30, 2020, 1:50 PM IST

ನವದೆಹಲಿ: ಲಾಕ್​ಡೌನ್​ದಲ್ಲಿ ದೇಶದಲ್ಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದು, ಅವರ ವಲಸೆ ಬಗ್ಗೆ ವರದಿ ನೀಡಿ ಎಂದು ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಲಾಕ್​ಡೌನ್​ ಜಾರಿಯಾದಾಗಿನಿಂದ ಬೃಹತ್​ ಪ್ರಮಾಣದಲ್ಲಿ ಕಾರ್ಮಿಕರು ನಗರ ಪ್ರದೇಶಗಳಿಂದ ವಲಸೆ ಹೋಗುತ್ತಿದ್ದು, ಈ ಕುರಿತು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವರದಿ ಒಪ್ಪಿಸಿ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಹಾಗೂ ನ್ಯಾಯಮೂರ್ತಿ ಎಲ್​.ನಾಗೇಶ್ವರ ರಾವ್​ ಅವರಿದ್ದ ಪೀಠ ಈ ರೀತಿಯ ಕಾರ್ಮಿಕರ ವಲಸೆ ದೊಡ್ಡ ಸಮಸ್ಯೆಯಾಗಿದೆ ಎಂದು ಉಲ್ಲೇಖಿಸಿದೆ. ವಕೀಲರಾದ ಅಲಾಖ್​ ಅಲೋಕ್​ ಶ್ರೀವತ್ಸ ಹಾಗೂ ರಶ್ಮಿ ಬನ್ಸಾಲ್​ ಅವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಪೀಠ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ಪರ ಭಾಗವಹಿಸಿದ್ದ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ವಲಸೆ ಹೋಗುತ್ತಿರುವ ಕಾರ್ಮಿಕರನ್ನು ತಡೆಯಬೇಕು. ಇಲ್ಲವದಲ್ಲಿ ಕೊರೊನಾ ಹರಡದಂತೆ ತಡೆಯುವುದು ಕಷ್ಟವಾಗಲಿದೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು. ಇದಾದ ನಂತರ ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.