ನವದೆಹಲಿ: 2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ಇಂದು ವಜಾಗೊಳಿಸಿದೆ.
ಬಳಿಕ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ಗೆ ಕಳುಹಿಸಿದ್ದು, ಅವರು ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ರವಾನಿಸಿದ್ದಾರೆ.
-
The Delhi government today rejected the mercy plea of 2012 Delhi gang-rape case convict Mukesh Singh. https://t.co/jZlD0mHlvf
— ANI (@ANI) January 16, 2020 " class="align-text-top noRightClick twitterSection" data="
">The Delhi government today rejected the mercy plea of 2012 Delhi gang-rape case convict Mukesh Singh. https://t.co/jZlD0mHlvf
— ANI (@ANI) January 16, 2020The Delhi government today rejected the mercy plea of 2012 Delhi gang-rape case convict Mukesh Singh. https://t.co/jZlD0mHlvf
— ANI (@ANI) January 16, 2020
ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸುವ ಬಗೆಗಿನ ಸ್ಥಿತಿಗತಿಗಳ ಕುರಿತು ಹಾಗೂ ಮರಣದಂಡನೆಯ ದಿನಾಂಕವನ್ನು ಸ್ಪಷ್ಟಪಡಿಸುವಂತೆ ಜ.17 ರಂದೇ ವರದಿ ಸಲ್ಲಿಸುವಂತೆ ದೆಹಲಿ ನ್ಯಾಯಾಲಯವು ತಿಹಾರ್ ಜೈಲಿನ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ಜನವರಿ 22 ರಂದು ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ ಮುಂದೂಡಿಕೆ ಕುರಿತು ತಿಹಾರ್ ಜೈಲಾಧಿಕಾರಿಗಳು ದೆಹಲಿ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದ ಬಳಿಕ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ಅರೋರಾ ಈ ನಿರ್ದೇಶನ ನೀಡಿದ್ದಾರೆ.