ನವದೆಹಲಿ: ತಿಹಾರ್ ಜೈಲಿನಲ್ಲಿದ್ದಾಗ ತಲೆಯನ್ನು ಗೋಡೆಗೆ ಹೊಡೆದುಕೊಂಡಿದ್ದ ನಿರ್ಭಯಾ ಪ್ರಕರಣದ ಅಪರಾಧಿಗೆ ವೈದ್ಯಕೀಯ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಪಟಿಯಾಲಾ ಕೋರ್ಟ್ ವಜಾಗೊಳಿಸಿದೆ.
-
During the hearing of 2012 Delhi gang-rape case, the court observed, 'General anxiety and depression in case of a death row convict is obvious. In the case at hand, evidently, adequate medical treatment and psychological help have been provided to the condemned convict'. https://t.co/Sp9szQFGZI
— ANI (@ANI) February 22, 2020 " class="align-text-top noRightClick twitterSection" data="
">During the hearing of 2012 Delhi gang-rape case, the court observed, 'General anxiety and depression in case of a death row convict is obvious. In the case at hand, evidently, adequate medical treatment and psychological help have been provided to the condemned convict'. https://t.co/Sp9szQFGZI
— ANI (@ANI) February 22, 2020During the hearing of 2012 Delhi gang-rape case, the court observed, 'General anxiety and depression in case of a death row convict is obvious. In the case at hand, evidently, adequate medical treatment and psychological help have been provided to the condemned convict'. https://t.co/Sp9szQFGZI
— ANI (@ANI) February 22, 2020
ನಿರ್ಭಯಾ ಪ್ರಕರಣ ಅಪರಾಧಿ ವಿನಯ್ ಶರ್ಮಾ ಪರ ವಕೀಲರು ಉಲ್ಲೇಖಿಸುತ್ತಿರುವಂತೆ ಅಪರಾಧಿಯು ಯಾವುದೇ ಮಾನಸಿಕ ಅಸ್ಥಿರತೆಯಿಂದ ಬಳಲುತ್ತಿಲ್ಲ. ಆತ ಇತ್ತೀಚೆಗಷ್ಟೇ ತನ್ನ ತಾಯಿ ಮತ್ತು ತನ್ನ ವಕೀಲರಿಗೆ ಎರಡು ಬಾರಿ ಫೋನ್ ಮಾಡಿದ್ದಾನೆ. ಆದರೆ, ಅಪರಾಧಿಯ ಪರ ವಕೀಲರು ಈ ರೀತಿಯ ಹೇಳಿಕೆಯನ್ನು ಏಕೆ ನೀಡುತ್ತಿದ್ದಾರೋ ತಿಳಿಯುತ್ತಿಲ್ಲ ಎಂದು ಸರ್ಕಾರಿ ಅಭಿಯೋಜಕ ಇರ್ಫಾನ್ ಅಹ್ಮದ್ ಹೇಳಿದ್ದರು. ಇದೀಗ ತೀರ್ಪು ನೀಡಿರುವ ಕೋರ್ಟ್, ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.
ಮಾರ್ಚ್ 3ರಂದು ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಅದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಜೈಲಿನಲ್ಲಿ ತಲೆ ಚಚ್ಚಿಕೊಂಡು ವಿನಯ್ ಗಾಯ ಮಾಡಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಇದಾದ ಬಳಿಕ ಆತನಿಗೆ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು. ಉನ್ನತ ಮಟ್ಟದ ಚಿಕಿತ್ಸೆ ಕೊಡಿಸುವಂತೆ ಕೋರಿ ಆತ ಕೋರ್ಟ್ ಮೆಟ್ಟಿಲೇರಿದ್ದ.
ಈ ಹಿಂದೆ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿಗಳ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ನಿರ್ಭಯಾ ಪ್ರಕರಣದ ಅಪರಾಧಿ ವಿನಯ್ ಶರ್ಮಾಗೆ ಅಲ್ಲೂ ಹಿನ್ನಡೆಯಾಗಿತ್ತು. ಇದಾದ ಬಳಿಕ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದ. ಇಲ್ಲೂ ಆತನಿಗೆ ಹಿನ್ನಡೆಯಾಗಿದ್ದರಿಂದ ಜೈಲಿನಲ್ಲಿ ಹಿಂಸೆಯಿಂದಾಗಿ ಮಾನಸಿಕ ಆರೋಗ್ಯ ಹದಗೆಟ್ಟಿದೆ ಎಂದು ಚಿಕಿತ್ಸೆ ಕೂಡಿಸುವಂತೆ ಮತ್ತೊಮ್ಮೆ ಕೋರ್ಟ್ ಮೆಟ್ಟಿಲೇರಿದ್ದ.