ನವದೆಹಲಿ: ಕೋವಿಡ್-19 ಪರಿಸ್ಥಿತಿಯನ್ನು ಎದುರಿಸಲು ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಯಾವ ರೀತಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂಬುದನ್ನು ಪರಿಶೀಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು.
ಈ ಸಭೆಗೂ ಮೊದಲು ಶಾ ಅವರು ಸರ್ವ ಪಕ್ಷಗಳ ಸಭೆ ನಡೆಸಿದ್ರು. ಈ ವೇಳೆ ಕಾಂಗ್ರೆಸ್ ಪ್ರತಿಯೊಬ್ಬರಿಗೂ ಕೊರೊನಾ ಪರೀಕ್ಷೆ ನಡೆಸಬೇಕು. ಅಲ್ಲದೇ ಸೋಂಕಿಗೆ ಒಳಗಾದ ಅಥವಾ ಕಂಟೈನ್ಮೆಂಟ್ ವಲಯದಲ್ಲಿರುವ ಪ್ರತಿ ಕುಟುಂಬಕ್ಕೆ 10.000 ರೂ. ಹಣ ನೀಡಬೇಕೆಂದು ಒತ್ತಾಯಿಸಿದೆ ಎಂದು ಮೂಲಗಳು ತಿಳಿಸಿವೆ.
-
At Delhi’s LNJP hospital to review the preparedness related to COVID-19. https://t.co/WA3FLyByUM
— Amit Shah (@AmitShah) June 15, 2020 " class="align-text-top noRightClick twitterSection" data="
">At Delhi’s LNJP hospital to review the preparedness related to COVID-19. https://t.co/WA3FLyByUM
— Amit Shah (@AmitShah) June 15, 2020At Delhi’s LNJP hospital to review the preparedness related to COVID-19. https://t.co/WA3FLyByUM
— Amit Shah (@AmitShah) June 15, 2020
ಆರೋಗ್ಯ ಸಿಬ್ಬಂದಿ ಕೊರತೆ ಉಂಟಾಗುತ್ತಿರುವುದರಿಂದ, ಬ್ಯಾಚುಲರ್ ಆಫ್ ಫಾರ್ಮಸಿ ಅಥವಾ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಆರೋಗ್ಯ ಸಿಬ್ಬಂದಿಯನ್ನಾಗಿ ಬಳಸಿಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಕೋವಿಡ್-19 ಪರೀಕ್ಷೆಗಾಗಿ ಖಾಸಗಿ ಲ್ಯಾಬ್ ದರವನ್ನು ಕಡಿತಗೊಳಿಸಬೇಕು. ಹಾಗೂ ಕೋವಿಡ್-19 ಕ್ಲಿನಿಕ್, ಆಸ್ಪತ್ರೆಗಳಲ್ಲಿ ಎನ್ಎಸ್ಎಸ್ ಮತ್ತು ಎನ್ಸಿಸಿ ಸ್ವಯಂಸೇವಕರನ್ನು ಬಳಸಿಕೊಳ್ಳಬೇಕೆಂದು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಕುಮಾರ್ ಗುಪ್ತಾ ಸಲಹೆ ನೀಡಿದ್ರು.
ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್, ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮತ್ತು ಎನ್‌ಐಟಿಐ ಆಯೋಗ್ ಸದಸ್ಯರು ಇತರ ಹಿರಿಯ ಅಧಿಕಾರಿಗಳೂ ಭಾಗವಹಿಸಿದ್ದರು.