ETV Bharat / bharat

ಕೊರೊನಾ ಭೀತಿ ಹಿನ್ನೆಲೆ: ಅಸ್ಸೋಂನಲ್ಲಿ 1,659 ಕೈದಿಗಳ ಬಿಡುಗಡೆ...! - ಸುಪ್ರೀಂ ಕೋರ್ಟ್'

ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಂಡ ಸುಪ್ರೀಂಕೋರ್ಟ್ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೈಲುವಾಸಿಗಳನ್ನು ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಅಸ್ಸೋಂನ 31 ಜೈಲುಗಳಿಂದ 1659 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Assam
ಅಸ್ಸಾಂನಲ್ಲಿ 1,659 ಕೈದಿಗಳ ಬಿಡುಗಡೆ
author img

By

Published : Apr 16, 2020, 4:25 PM IST

ಗುವಾಹಟಿ: ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಂಡ ಸುಪ್ರೀಂಕೋರ್ಟ್​ ಈ ಹಿಂದೆ ಜೈಲುವಾಸಿಗಳನ್ನು ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಅಸ್ಸೋಂನ 31 ಜೈಲುಗಳಿಂದ 1,659 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಇನ್ಸ್​ಪೆಕ್ಟರ್​ ಜನರಲ್​ ದಶರಥ್​ ದಾಸ್​​ ಮಾತನಾಡಿ, ರಾಜ್ಯದ ವಿವಿಧ ಜೈಲುಗಳಿಂದ ಒಟ್ಟು 1,659 ಕೈದಿಗಳನ್ನು ಬಿಡುಗಡೆ ಮಾಡಿದ್ದೇವೆ. ಇದರಲ್ಲಿ 1,591 ಮಂದಿ ಜಾಮೀನು ಮತ್ತು ಬಾಂಡ್​ಗಳ ಮೂಲಕ ಬಿಡುಗಡೆಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೈದಿಗಳನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ. ಹಾಗೂ ಕೆಲ ಪ್ರಸ್ತಾಪಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಿದ್ದೇವೆ ಎಂದಿದ್ದಾರೆ.

ಇನ್ನು 68 ಕೈದಿಗಳನ್ನು ವಾರ್ಷಿಕ ರಜೆ ಮೇಲೆ ಮನೆಗೆ ಹೋಗಲು ಅನುಮತಿ ನೀಡಲಾಗಿದೆ. ಅಷ್ಟೇ ಅಲ್ಲದೆ, ಅರ್ಹ ಕೈದಿಗಳಿಗೆ ನಿಯಮದಂತೆ 30 ದಿನಗಳ ರಜೆ ನೀಡಲಾಗಿದೆ. ಇನ್ನು 18 ಅಪರಾಧಿಗಳಿಂದ ಪೆರೋಲ್​ ಪ್ರಸ್ತಾಪ ಸ್ವೀಕರಿಸಿದ್ದು, ಅವರು ಅದಕ್ಕೆ ಅರ್ಹರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಎರಡ್ಮೂರು ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕೋವಿಡ್​ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದ ಅಪರಾಧಗಳಿಗೆ ಪೆರೋಲ್ ಅಥವಾ ಮಧ್ಯಂತರ ಜಾಮೀನು ಕೈದಿಗಳು ಮತ್ತು ಅಪರಾಧಿಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಮಿತಿಗಳನ್ನು ರಚಿಸುವಂತೆ ಮಾರ್ಚ್ 23ರಂದು ಸುಪ್ರೀಂಕೋರ್ಟ್ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.