ನವದೆಹಲಿ: ಸರ್ಕಾರದ ನಿಗಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ದೆಹಲಿಯ ಮೂಲ ನಿವಾಸಿಗಳಿಗೆ ಮಾತ್ರ ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗುವಂತೆ ನೋಡಿಕೊಳ್ಳಬೇಕೆಂದು ದೆಹಲಿ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶಿಸಿದೆ.
ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ COVID-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಹಾಸಿಗೆಗಳು, ಮೂಲಸೌಕರ್ಯಗಳ ಹೆಚ್ಚುವರಿ ಬೇಡಿಕೆ ಕಂಡುಬಂದಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.
"ದೆಹಲಿ ಸಾಂಕ್ರಾಮಿಕ ಕಾಯಿಲೆಗಳು, ಕೋವಿಡ್ -19, ರೆಗ್ಯುಲೇಷನ್ಸ್, 2020 ಸಾಂಕ್ರಾಮಿಕ ರೋಗಗಳ ಕಾಯ್ದೆ, 1897 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸುವಾಗ, ದೆಹಲಿಯ ಸರ್ಕಾರದ ಅಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಆಸ್ಪತ್ರೆಗಳು ಮತ್ತು ಎಲ್ಲ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಅಗತ್ಯ ದಾಖಲೆ ಹೊಂದಿರುವ ಮೂಲ ನಿವಾಸಿಗಳೆಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೆಕೆಂದು ಅಲ್ಲಿನ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೊರೊನಾ ಹೊರತುಪಡಿಸಿ, ಇನ್ನಿತರ ರೋಗಗಳು ಹಾಗೂ ಯಾವುದೇ ರಸ್ತೆ ಅಪಘಾತ, ಆಸಿಡ್ ದಾಳಿಯಂತಹ ಸಂದರ್ಭಗಳಲ್ಲಿ ದೆಹಲಿ ಮೂಲ ನಿವಾಸಿಗಳಲ್ಲದವರಿಗೂ ತುರ್ತು ಚಿಕಿತ್ಸೆ ನೀಡುವಂತೆ ಸರ್ಕಾರ ಆಸ್ಪತ್ರೆಗಳಿಗೆ ಸೂಚಿಸಿದೆ.