ETV Bharat / bharat

ಪಿಪಿಇ, ಎನ್‌95 ಮಾಸ್ಕ್‌, ವೆಂಟಿಲೇಟರ್ಸ್‌ ದಾಸ್ತಾನು ಇಡಿ ; ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಕೋವಿಡ್‌-19 ನಿಯಂತ್ರಿಸುವ ಸಂಬಂಧ ಕೇಂದ್ರ ಸಚಿವ ಡಾ.ಹರ್ಷವರ್ಧನ್‌ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದರು. ಅಗತ್ಯ ಆರೋಗ್ಯ ರಕ್ಷಣಾ ಸಾಮಾಗ್ರಿಗಳನ್ನು ದಾಸ್ತಾನು ಇಟ್ಟುಕೊಳ್ಳುವಂತೆ ತಾಕೀತು ಮಾಡಿದ್ದಾರೆ.

Harsh Vardhan
ಡಾ.ಹರ್ಷವರ್ಧನ್
author img

By

Published : Apr 24, 2020, 8:20 PM IST

Updated : Apr 24, 2020, 8:35 PM IST

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಇಂದು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಕೋವಿಡ್​-19 ನಿರ್ವಹಣೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದಿದ್ದಾರೆ.

ಪಿಪಿಇ ಕಿಟ್, ಎನ್‌95 ಮಾಸ್ಕ್​ಗಳು, ವೆಂಟಿವೇಟರ್ಸ್‌ಗಳನ್ನು ​ದಾಸ್ತಾನು ಇಟ್ಟುಕೊಳ್ಳಬೇಕು. ಯಾವುದೇ ತುರ್ತು ಪರಿಸ್ಥಿತಿ ಬಂದರೂ ವೈದ್ಯಕೀಯ ಸಲಕರಣಿಗಳಲ್ಲಿ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.

ಕೊರೊನಾ ವೈರಸ್‌ ತಡೆಗಟ್ಟಲು ಲಾಕ್​ಡೌನ್​ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಚಿವರು ಕೈಗೊಂಡಿರುವ ಕ್ರಮಗಳಿಗೆ ಕೇಂದ್ರ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನು, ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23,077ಕ್ಕೆ ಏರಿಕೆಯಾಗಿದ್ದು, 718 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, 6,430ಕ್ಕೆ ಏರಿಕೆಯಾಗಿದೆ.

Last Updated : Apr 24, 2020, 8:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.