ತಿರುವನಂತಪುರಂ(ಕೇರಳ): ಶಬರಿಮಲೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಕೇರಳ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಕಟ್ಟುನಿಟ್ಟಾದ ಕೋವಿಡ್ ಪ್ರೋಟೋಕಾಲ್ ಅನ್ನು ಯಾತ್ರಿಕರು ಅನುಸರಿಸಬೇಕಾಗುತ್ತದೆ.
ಯಾತ್ರಾರ್ಥಿಗಳು ಭೇಟಿಗೆ 24 ಗಂಟೆ ಮೊದಲು ತೆಗೆದುಕೊಂಡ ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಸೋಂಕಿಗೆ ಒಳಗಾದವರು ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಯಾವುದೇ ರೋಗಲಕ್ಷಣಗಳು ಕಂಡುಬಂದರೆ ಅಂತವರನ್ನು ವಾಪಸ್ ಕಳುಹಿಸಲಾಗುತ್ತದೆ.
ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನೆಗೆಟಿವ್ ಬಂದರೂ ಜಾಗರೂಕತೆ ವಹಿಸುವಂತೆ ತಿಳಿಸಿದ್ದು, ಸನ್ನಿಧಾನಂ ಮತ್ತು ನೀಲಕ್ಕಲ್‌ನಲ್ಲಿ ಗುಂಪು ಗುಂಪಾಗಿರಲು ಅವಕಾಶವಿಲ್ಲ ಎಂದು ಹೇಳಿದೆ.
ಬೆಟ್ಟದ ಮೇಲೆ ಮತ್ತು ಕೆಳಗೆ ಚಾರಣ ಮಾಡುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ನಿರ್ದೇಶಿಸಲಾಗಿದೆ. ಚಾಲಕರು ಸಹ ಮಾರ್ಗಸೂಚಿಗಳ ಪ್ರಕಾರ ಕಾರ್ಯನಿರ್ವಹಿಸಬೇಕಾಗುತ್ತದೆ. ಇದಲ್ಲದೆ, ಮಾಸ್ಕ್ ಧರಿಸುವುದು, ಆಗಾಗ್ಗೆ ಕೈ ತೊಳೆಯುವುದು ಮತ್ತು ಸ್ಯಾನಿಟೈಸರ್ಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.