ನವದೆಹಲಿ: ಕೋವಿಡ್ ಅಬ್ಬರಕ್ಕೆ ಭಾರತ ತಲ್ಲಣಿಸಿದ್ದು, ಈವರೆಗೆ ಸುಮಾರು ಐದೂವರೆ ಲಕ್ಷ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೊಂದೆಡೆ ಚೇತರಿಕೆಯ ಪ್ರಮಾಣ ಕೂಡ ಶೇ.58.67ರಷ್ಟು ಇರುವುದು ತುಸು ಸಮಾಧಾನಕರ ವಿಷಯವಾಗಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 19,459 ಸೋಂಕಿತರು ಪತ್ತೆಯಾಗಿದ್ದು, 380 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5,48,318ಕ್ಕೆ ಹಾಗೂ ಮೃತರ ಸಂಖ್ಯೆ 16,475ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಚೇತರಿಕೆಯ ಪ್ರಮಾಣದಲ್ಲಿ ಕೂಡ ಗಣನೀಯ ಏರಿಕೆ ಕಂಡು ಬಂದಿದ್ದು, ಶೇ.58.67 ರಷ್ಟು ಅಂದರೆ 3,21,723 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,10,120 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.