ನವದೆಹಲಿ: ಭಾರತದಲ್ಲಿ ಕಿಲ್ಲರ್ ಕೊರೊನಾ ಹಾವಳಿ ಹೆಚ್ಚಾಗಿದ್ದು, ಪ್ರಕರಣಗಳ ಸಂಖ್ಯೆ 2 ಮಿಲಿಯನ್(20 ಲಕ್ಷ) ಗಡಿ ದಾಟಿದೆ. ಕೋವಿಡ್ ಕೇಸ್ ಹಾಗೂ ಸಾವಿನ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲೇ ಇದ್ದು, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ದೆಹಲಿ ಹಾಗೂ ಉತ್ತರ ಪ್ರದೇಶ ನಂತರದ ಸ್ಥಾನಗಳಲ್ಲಿವೆ.
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 62,538 ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,27,075ಕ್ಕೆ ಹಾಗೂ ಮೃತರ ಸಂಖ್ಯೆ 41,585ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 13,78,106 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 6,07,384 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 6ರ ವರೆಗೆ 2,27,24,134 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 5,74,783 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.