ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 57 ಲಕ್ಷ ಗಡಿ ದಾಟಿದ್ದು, ಶೇ. 80ಕ್ಕೂ ಅಧಿಕ ಸೋಂಕಿತರು ಮಹಾಮಾರಿಯಿಂದ ಚೇತರಿಸಿಕೊಂಡಿದ್ದಾರೆ. ಕಳೆದ ಐದು ದಿನಗಳಲ್ಲಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾದವರ ಪ್ರಮಾಣವೇ ಹೆಚ್ಚಿದೆ ಎಂದು ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ.
ಕಳೆದ 24 ಗಂಟೆಗಳಲ್ಲಿ ಹೊಸದಾಗಿ 86,508 ಮಂದಿಗೆ ವೈರಸ್ ಅಂಟಿದ್ದು, 1,129 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 57,32,519 ಹಾಗೂ ಮೃತರ ಸಂಖ್ಯೆ 91,149ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 46,74,988 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 9,66,382 ಕೇಸ್ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೆಪ್ಟೆಂಬರ್ 23ರವರೆಗೆ 6,74,36,031 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,56,569 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.