ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಏಕಾಏಕಿ ಉಲ್ಬಣಗೊಂಡ ಹಿನ್ನಲೆ ಅದರ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ಡೌನ್ ಆದೇಶ ಹೊರಡಿಸಿದೆ. ಈ ಮಧ್ಯೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದರಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಆದಾಗ್ಯೂ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಎಲ್ಲಾ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ವಿದ್ಯಾರ್ಥಿಗಳ ಮಾನಸಿಕ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಮಾನಸಿಕ ಆರೋಗ್ಯ ಸಹಾಯವಾಣಿಗಳನ್ನು ಸ್ಥಾಪಿಸುವಂತೆ ನಿರ್ದೇಶಿಸಿದೆ. ಆದರೆ, ಅದೂ ಕೂಡ ಇನ್ನೂ ಕಾರ್ಯರೂಪಕ್ಕೆ ಬಂದಂತೆ ಕಾಣುತ್ತಿಲ್ಲ.
ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ನೀಟ್ ಪರೀಕ್ಷೆಯ ಅಂಕಗಳನ್ನು ಪಪರಿಗಣಿಸಲಾಗುತ್ತದೆ ಎಂಬುದು ಇಲ್ಲಿ ಗಮನಾರ್ಹ. ಸಾಮಾನ್ಯವಾಗಿ ಜೂನ್‌ನಲ್ಲಿ ಫಲಿತಾಂಶಗಳು ಹೊರಬಂದು ನಂತರ ಕಾಲೇಜುಗಳಿಗೆ ಪ್ರವೇಶ ಪ್ರಾರಂಭವಾಗುತ್ತದೆ. ಅದರೆ, ಸದ್ಯದ ಪರಿಸ್ಥಿತಿ ನೋಡುತ್ತಿದ್ದರೆ ಹೊಸ ಅಧಿವೇಶನ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯೇ ಇಲ್ಲದೆ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿಹೊಗುತ್ತಿದ್ದಾರೆ.