ತಿರುವನಂತಪುರಂ (ಕೇರಳ): ನವೆಂಬರ್ 16 ರಿಂದ ಎರಡು ತಿಂಗಳ ಕಾಲ ಶಬರಿಮಲೆ ದೇವಾಲಯ ಭಕ್ತಾದಿಗಳಿಗೆ ತೆರೆಯಲಿದ್ದು, ಬೆಟ್ಟದ ಮೇಲಿರುವ ಭಗವಾನ್ ಅಯ್ಯಪ್ಪನ ದರ್ಶನ ಪಡೆಯಲು ಭಕ್ತರ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯವಾಗಿದೆ.
ಕೋವಿಡ್-19 ನಕಾರಾತ್ಮಕ ಪ್ರಮಾಣಪತ್ರದೊಂದಿಗೆ ಶಬರಿಮಲೆಗೆ ಹೋಗಬೇಕಾದ ಭಕ್ತರು ತಮ್ಮ ಹೆಸರುಗಳನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಇದಾದ ಬಳಿಕ ಅವರಿಗೆ ಅನುಮತಿ ನೀಡಲಾಗುತ್ತದೆ.
ಸೀಮಿತ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಮತ್ತು ವರ್ಚುವಲ್ ಕ್ಯೂ ನಿರ್ವಹಣಾ ವ್ಯವಸ್ಥೆಯ ಮೂಲಕ ಪ್ರವೇಶ ನಿರ್ವಹಣೆ ಮಾಡಲಾಗುವುದು ಎಂದು ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಆನ್‌ಲೈನ್ ಸಭೆಯಲ್ಲಿ ನಿರ್ಧರಿಸಲಾಯಿತು.
ಶಬರಿಮಲೆ ದೇವಾಲಯವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧ್ಯಕ್ಷ ಎನ್. ಕೂಡಾ ಸಭೆಯಲ್ಲಿ ಭಾಗವಹಿಸಿದ್ದರು. ದೇವಳದಲ್ಲಿ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ಧಾರ ಕೈಗೊಳ್ಳಲಾಯಿತು.
"ಮುಂದಿನ ಸಭೆಗಳಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಮುಂಬರುವ ಸಭೆಗಳಲ್ಲಿ ಮುಖ್ಯಮಂತ್ರಿಯೂ ಸೇರಿಕೊಳ್ಳಲಿದ್ದಾರೆ" ಎಂದು ಸುರೇಂದ್ರನ್ ಹೇಳಿದರು.