ETV Bharat / bharat

ಕೊರೊನಾ ಸೋಂಕಿತ ಮಹಿಳೆ ಮೇಲೆ ಆ್ಯಂಬುಲೆನ್ಸ್​ ಚಾಲಕನಿಂದ ಅತ್ಯಾಚಾರ ಆರೋಪ

author img

By

Published : Sep 6, 2020, 3:38 PM IST

ಪಥನಂತಿಟ್ಟ ಜಿಲ್ಲೆಯ ಅರಣ್ಮುಲ ಬಳಿ ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ಯುವತಿಗೆ ಆಂಬ್ಯುಲೆನ್ಸ್‌ನಲ್ಲೇ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

covid-19 patient was allegedly rapaed by an ambulance driver
ಕೊರೊನಾ ಸೋಂಕಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ

ಪಥನಂತಿಟ್ಟ(ಕೇರಳ): ಕೊರೊನಾ ಸೋಂಕಿತ ಮಹಿಳೆ ಮೇಲೆ ಆ್ಯಂಬುಲೆನ್ಸ್ ಚಾಲಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಪಥನಂತಿಟ್ಟ ಜಿಲ್ಲೆಯ ಅರಣ್ಮುಲ ಬಳಿ ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ಯುವತಿಗೆ ಆಂಬ್ಯುಲೆನ್ಸ್‌ನಲ್ಲೇ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಸಂತ್ರಸ್ತೆಯನ್ನು ಪಂಡಲಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. 108 ಆಂಬುಲೆನ್ಸ್‌ ಚಾಲಕ ಕಾಯಂಕುಲಂ ಕಿರಿಕಾಡು ನೌಫಾಲ್‌ನನ್ನು ಬಂಧಿಸಲಾಗಿದೆ.

ರಾತ್ರಿ ಒಂದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆಕೆಯನ್ನು ಕೋವಿಡ್ ಆರೈಕೆ ಕೇಂದ್ರದಿಂದ ಚಿಕಿತ್ಸಾ ಕೇಂದ್ರಕ್ಕೆ ಕರೆದೊಯ್ಯುತ್ತಿರುವಾಗ ಲೈಂಗಿಕ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.

ಚಿಕಿತ್ಸಾ ಕೇಂದ್ರಕ್ಕೆ ಬಂದ ಮಹಿಳೆಯು ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾಳೆ. ನಂತರ ಆರೋಗ್ಯ ಕಾರ್ಯಕರ್ತರು ಈ ವಿಷಯವನ್ನು ಪೊಲೀಸರಿಗೆ ವರದಿ ಮಾಡಿದ್ದಾರೆ. ಕಿರುಕುಳದ ಬಗ್ಗೆ ಯಾರಿಗೂ ಹೇಳದಂತೆ ಚಾಲಕ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಯುವತಿಯನ್ನು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.