ನವದೆಹಲಿ: ವಿಶ್ವಾದ್ಯಂತ ಕೊರೊನಾ ವೈರಸ್‌ನಿಂದ ಮೃತಪಟ್ಟವರ ಸಂಖ್ಯೆ ಇದೀಗ 11 ಸಾವಿರ ದಾಟಿದೆ. ಈವರೆಗೆ 11,310 ಮಂದಿ ವಿಶ್ವಾದ್ಯಂತ ಮಾರಕ ವೈರಸ್ ದಾಳಿಗೆ ಜೀವಬಿಟ್ಟಿದ್ದಾರೆ ಈವರೆಗೆ ಪ್ರಪಂಚದಾದ್ಯಂತ 2,72,000 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಪೈಕಿ 80 ಸಾವಿರಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದರೆ, 5 ಸಾವಿರ ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಭಾರತದಲ್ಲಿ ಈವರೆಗೆ ಒಟ್ಟು 327 ಕೋವಿಡ್-19 ಪ್ರಕರಣಗಳು ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೊರೊನಾ ವೈರಸ್ಗೆ ದೇಶದಲ್ಲಿ ಐದು ಮಂದಿ ಬಲಿಪಟ್ಟಿದ್ದು, 22 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 104 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯ ಪ್ರಮಾಣ ದುಪ್ಪಟ್ಟಾಗಿದೆ.
ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 12 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಇನ್ನು ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ ಆಗಿದೆ.
![Coronavirus cases in India](https://etvbharatimages.akamaized.net/etvbharat/prod-images/6493740_cplolo.jpg)