ನವದೆಹಲಿ: ದೇಶದಲ್ಲಿ ಕೊವಿಡ್-19 ನಿಂದಾಗಿ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆ ಎಲ್ಲಾ ಪರೀಕ್ಷೆಗಳನ್ನು ಮಾ.31ರ ವರೆಗೆ ಮುಂದೂಡುವಂತೆ ವಿಶ್ವವಿದ್ಯಾಲಯಗಳಿಗೆ ಹಾಗೂ ವಿವಿ ಅನುದಾನಿತ ಕಾಲೇಜುಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ನಿರ್ದೇಶಿಸಿದೆ.
ಹಾಗೆಯೇ ಈಗಾಗಲೇ ನಡೆದಿರುವ ಪರೀಕ್ಷೆಗಳ ಮೌಲ್ಯಮಾಪನವನ್ನೂ ಸಹ ನಿಲ್ಲಿಸುವಂತೆ ಸೂಚಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದಂತೆಯೇ ಪರೀಕ್ಷೆಗಳಿಗೆ ಮರು ವೇಳಾಪಟ್ಟಿಯನ್ನು ನೀಡುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ಆಯೋಗ ತಿಳಿಸಿದೆ.
ಅಲ್ಲದೇ ದೂರವಾಣಿ, ಇ-ಮೇಲ್ಗಳ ಮುಖಾಂತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ನೀಡುತ್ತಿರುವಂತೆ ಆಯೋಗ ಸೂಚಿಸಿದೆ.
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 169ಕ್ಕೆ ಏರಿಕೆಯಾಗಿದ್ದು, ಮೂವರು ಬಲಿಯಾಗಿದ್ದಾರೆ.