ETV Bharat / bharat

'ಚುನಾವಣೆ ಪ್ರಕ್ರಿಯೆಯಂತೆ ಬೂತ್ ಮಟ್ಟದಲ್ಲಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್'

author img

By

Published : Jan 3, 2021, 9:08 AM IST

ಜುಲೈ ತನಕ ಇನ್ನೂ 27 ಕೋಟಿ ಫಲಾನುಭವಿಗಳಿಗೆ ಕೋವಿಡ್-19 ಲಸಿಕೆ ನೀಡಬೇಕೆಂಬ ವಿವರಗಳನ್ನು ಅಂತಿಮಗೊಳಿಸಲಾಗುತ್ತಿದೆ. ಅಲ್ಲದೆ ಕೋವಿಡ್-19 ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ವದಂತಿಗಳು ಮತ್ತು ತಪ್ಪು ಮಾಹಿತಿಗೆ ಬಲಿಯಾಗಬೇಡಿ..

Harsh Vardhan
ಡಾ.ಹರ್ಷವರ್ಧನ್

ನವದೆಹಲಿ : ಚುನಾವಣಾ ಪ್ರಕ್ರಿಯೆಯ ಆಧಾರದ ಮೇಲೆ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್‌ನ ಬೂತ್ ಮಟ್ಟಕ್ಕೆ ಇಳಿಸಲಾಗಿದೆ ಮತ್ತು ಈವರೆಗೆ 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

"ವ್ಯಾಕ್ಸಿನೇಷನ್ ಡ್ರೈವ್, ಬೂತ್ ಮಟ್ಟಕ್ಕೆ ಯೋಜಿಸಲಾದ ಚುನಾವಣಾ ಪ್ರಕ್ರಿಯೆಯನ್ನು ಆಧರಿಸಿದೆ. 719 ಜಿಲ್ಲೆಗಳಲ್ಲಿ 57,000ಕ್ಕೂ ಹೆಚ್ಚು ಮಂದಿ ತರಬೇತಿ ಪೂರ್ಣಗೊಳಿಸಿದ್ದಾರೆ. ಈವರೆಗೆ 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಕೋವಿಡ್-19 ಲಸಿಕೆ ನೀಡಲು ಡ್ರೈ ರನ್ ಡ್ರಿಲ್ ಪರಿಶೀಲಿಸಲು ಸಚಿವರು ದೆಹಲಿಯ ಶಹದಾರಾದ ಜಿಟಿಬಿ ಆಸ್ಪತ್ರೆ ಮತ್ತು ದರಿಯಗಂಜ್‌ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಯುಪಿಹೆಚ್​ಸಿ) ಶನಿವಾರ ಭೇಟಿ ನೀಡಿದರು.

ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿರುವ ಕೋವಿಡ್-19 ಲಸಿಕೆ ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಸಚಿವಾಲಯವು ಶನಿವಾರ 285 ಸ್ಥಳಗಳಲ್ಲಿ ರಾಷ್ಟ್ರವ್ಯಾಪಿ ಅಣಕು ಡ್ರಿಲ್ ನಡೆಸಿತು.

ಜುಲೈ ತನಕ ಇನ್ನೂ 27 ಕೋಟಿ ಫಲಾನುಭವಿಗಳಿಗೆ ಕೋವಿಡ್-19 ಲಸಿಕೆ ನೀಡಬೇಕೆಂಬ ವಿವರಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ. ಅಲ್ಲದೆ ಕೋವಿಡ್-19 ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ವದಂತಿಗಳು ಮತ್ತು ತಪ್ಪು ಮಾಹಿತಿಗೆ ಬಲಿಯಾಗಬೇಡಿ ಎಂದು ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.