ETV Bharat / bharat

ಆಂಧ್ರದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಶೇ.8.3ಕ್ಕೆ ಇಳಿಮುಖ: ಜಗನ್ ಮೋಹನ್ ರೆಡ್ಡಿ - ಅಧಿಕಾರಿಗಳೊಂದಿಗೆ ಜಗನ್ ಮೋಹನ್ ರೆಡ್ಡಿ ವಿಡಿಯೋ ಕಾನ್ಫರೆನ್ಸ್

ಕೋವಿಡ್​ ಪರೀಕ್ಷಾ ಪ್ರಮಾಣ ಹೆಚ್ಚಿದೆ ಮತ್ತು ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

Andhra CM held a meeting of officials
ಅಧಿಕಾರಿಗಳ ಸಭೆ ನಡೆಸಿದ ಆಂಧ್ರ ಸಿಎಂ
author img

By

Published : Sep 30, 2020, 11:27 AM IST

ಅಮರಾವತಿ (ಆಂಧ್ರ ಪ್ರದೇಶ) : ಕೋವಿಡ್​ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಕಳೆದ ಎರಡು ವಾರಗಳಲ್ಲಿ ಶೇ.12 ರಷ್ಟಿದ್ದ ಪ್ರಕರಣಗಳ ಸಂಖ್ಯೆ ಸಕರಾತ್ಮಕವಾಗಿ ಶೇ. 8.3 ರಕ್ಕೆ ಇಳಿದಿದೆ ಎಂದು ಮುಖ್ಯಮಂತ್ರಿ ವೈ.ಎಸ್.ಜಗನ್​ಮೋಹನ್ ರೆಡ್ಡಿ ಹೇಳಿದ್ದಾರೆ.

'ಸ್ಪಂದನಾ' ಪರಿಶೀಲನಾ ಸಭೆಯ ಅಂಗವಾಗಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಅವರು, ಕೋವಿಡ್​ ಪರೀಕ್ಷಾ ಪ್ರಮಾಣ ಹೆಚ್ಚಿದೆ ಮತ್ತು ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ನಾವು ಕೋವಿಡ್​ನೊಂದಿಗೆ ಬದುಕಬೇಕಾಗಿದೆ ಎಂದು ಪುನರುಚ್ಚರಿಸಿದ ಅವರು, ಎಚ್ಚರಿಕೆ ವಹಿಸಬೇಕು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 104 ಸಹಾಯವಾಣಿಯನ್ನು ಉತ್ತಮವಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಸಿಗೆಗಳ ಲಭ್ಯತೆ, ಪರೀಕ್ಷಾ ವರದಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕೂಡ ಸಮರ್ಪಕವಾಗಿ ನೀಡುವಂತೆ ಹೇಳಿದರು. ಸಹಾಯವಾಣಿ ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿದೆಯೆ ಎಂದು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ಸಹಾಯವಾಣಿ ನಿರ್ವಹಿಸುವ ಕರೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಣಕು ಕರೆಗಳನ್ನು ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಸಿರಿ ಯೋಜನೆಯಡಿ ಕೋವಿಡ್​ ಚಿಕಿತ್ಸೆ ನೀಡುತ್ತಿರುವ ಏಕೈಕ ರಾಜ್ಯ ಆಂಧ್ರ ಪ್ರದೇಶ. ಗ್ರಾಮಗಳಲ್ಲಿ ಆಸ್ಪತ್ರೆಗಳು, ವಾರ್ಡ್​ ಸೆಕ್ರೆಟರಿಯೇಟ್​ಗಳು ​ ಲಭ್ಯವಿರುವ ಕೋವಿಡ್ ಆಸ್ಪತ್ರೆಗಳ ಪಟ್ಟಿಯನ್ನು ಪ್ರದರ್ಶಿಸುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದರು. ಅಲ್ಲದೆ, ರಾಜ್ಯದ ಎಲ್ಲಾ 240 ಕೋವಿಡ್​ ಆಸ್ಪತ್ರೆಗಳಲ್ಲೂ ಗುಣಮಟ್ಟ ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ಕೋವಿಡ್ ಆಸ್ಪತ್ರೆಗಳಲ್ಲಿ ನೈರ್ಮಲ್ಯ ಸಿಬ್ಬಂದಿ, ಮೂಲ ಸೌಕರ್ಯಗಳು, ರೋಗಿಗಳಿಗೆ ಆಹಾರ ಪೂರೈಕೆ ಸರಿಯಾಗಿ ಇದೆಯೇ ಎಂದು ನಿಯಮಿತವಾಗಿ ಪರೀಶೀಲನೆ ನಡೆಸುತ್ತಿರಬೇಕೆಂದು ಸೂಚಿಸಿದರು.

ಆಂಧ್ರ ಪ್ರದೇಶದಲ್ಲಿ 16 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಕುರಿತು ಮಾತನಾಡಿದ ಸಿಎಂ, ಅಮಲಾಪುರಂ, ಮದನಪಲ್ಲೆ, ಪಿಡುಗುರಲ್ಲ, ಅಡೋನಿ, ಎಲೂರು ಮತ್ತು ಪುಲಿವೆಂಡುಲಾದಲ್ಲಿ ವೈದ್ಯಕೀಯ ಕಾಲೇಜುಗಳಿಗೆ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾಕಿನಾಡ, ಅನಂತಪುರ ಮತ್ತು ಒಂಗೋಲ್​ನಲ್ಲಿ ಅಸ್ತಿತ್ವದಲ್ಲಿರುವ ವೈದ್ಯಕೀಯ ಕಾಲೇಜುಗಳನ್ನು ವಿಸ್ತರಿಸಲು ಹೆಚ್ಚುವರಿ ಭೂಮಿಯನ್ನು ಗುರುತಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.