ಬಿಹಾರ್: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಅವರನ್ನು ಬಿಹಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಹಾತ್ಮ ಗಾಂಧಿಯ ಪುಣ್ಯ ಸ್ಮರಣೆಯ ಅಂಗವಾಗಿ ಬಿಹಾರದ ಬೇತಿಯಾ ನಗರದಲ್ಲಿ ಕನ್ಹಯ್ಯ ಕುಮಾರ್, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ 'ದೇಶ ಉಳಿಸಿ, ಪೌರತ್ವ ಉಳಿಸಿ' (ದೇಶ್ ಬಚಾವೋ, ನಾಗರೀಕತಾ ಬಚಾವೋ) ಎಂದು ರ್ಯಾಲಿ ಹಮ್ಮಿಕೊಂಡಿದ್ದರು.